ಬೆಂಗಳೂರು: ರಾಜ್ಯದಲ್ಲಿ ಇನ್ನು 4 ವರ್ಷಗಳ ಕಾಲ ಮೈತ್ರಿ ಸರ್ಕಾರ ಮುಂದುವರಿಯುತ್ತದೆ. ಸರ್ಕಾರಕ್ಕೆ ಯಾವುದೇ ಅಭದ್ರತೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಹೇಳಿಕೆ ನೀಡಿದ್ದಾರೆ.
ಲೋಕಸಭಾ ಚನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಶುಕ್ರವಾರ ಸಮನ್ವಯ ಸಮಿತಿಯ ಮಹತ್ವದ ಸಭೆ,ಅನೌಪಚಾರಿಕ ಸಂಪುಟ ಸಭೆಯ ಬಳಿಕ ಕಾಂಗ್ರೆಸ್-ಜೆಡಿಎಸ್ ಜಂಟಿ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಪರಮೇಶ್ವರ್ ಅವರು ಹೇಳಿಕೆ ನೀಡಿದ್ದಾರೆ.
ಲೋಕಸಭಾ ಚುನಾವಣೆಗೆ ಜನರು ನೀಡಿರುವ ತೀರ್ಪು ಕೇಂದ್ರ ಸರ್ಕಾರದ ಕುರಿತಾಗಿ , ಆ ತೀರ್ಪು ರಾಜ್ಯ ಸರ್ಕಾರಕ್ಕೆ ಅನ್ವಯಿಸುವುದಿಲ್ಲ, ಫಲಿತಾಂಶ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ವಿರೋಧ ಪಕ್ಷದವರ ಹೇಳಿಕೆಗಳಿಗೆ ಸ್ಪಂದಿಸದೆ ಸರ್ಕಾರ ಮುಂದುವರಿಸುತ್ತೇವೆ. ಸರ್ಕಾರಕ್ಕೆ ಯಾವುದೇ ಅಭದ್ರತೆ ಇಲ್ಲ. ನಾವು ಮುಖ್ಯಮಂತ್ರಿಗೆ ವಿಶ್ವಾಸವನ್ನು ವ್ಯಕ್ತ ಪಡಿಸಿ ತೀರ್ಮಾನ ಕೈಗೊಂಡಿದ್ದೇವೆ.
ಸಮನ್ವಯ ಸಮಿತಿ ಯ ಅಧ್ಯಕ್ಷ ಸಿದ್ದರಾಮಯ್ಯ ಅವರೂ ಒಪ್ಪಿಗೆ ಸೂಚಿಸಿದ್ದಾರೆ. ವಿಪಕ್ಷ ನಡೆಸುತ್ತಿರುವ ಷಡ್ಯಂತ್ರಕ್ಕೆ ಅವಕಾಶ ಕೊಡುವುದಿಲ್ಲ ಎಂದು ಅವರು ಹೇಳಿದ್ದಾರೆ ಎಂದರು.
ಸರ್ಕಾರ 4 ವರ್ಷ ಮುಂದುವರಿಯುತ್ತದೆ ರಾಜ್ಯದ ಜನರಿಗೆ ನಿರಾಶೆಯನ್ನು ಮಾಡುವುದಿಲ್ಲ ಎಂದು ಒತ್ತಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಿಎಂ ಕುಮಾರಸ್ವಾಮಿ ಅವರು ಮಾತನಾಡಲಿಲ್ಲ. ಪರಮೇಶ್ವರ್ ಅವರು ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸಲು ಮುಂದಾಗಲಿಲ್ಲ.