Advertisement

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

01:56 PM Jan 05, 2025 | Team Udayavani |

ಅಹಮದಬಾದ್: ಸೇನಾ ಹೆಲಿಕಾಪ್ಟರ್‌ ಪತನಗೊಂಡು ಮೂವರು ಮೃತಪಟ್ಟಿರುವ ಘಟನೆ ಗುಜರಾತ್ ನ ಪೋರ್ ಬಂದರ್ ನಲ್ಲಿ ಭಾನುವಾರ (ಜ.5ರಂದು) ನಡೆದಿರುವುದು ವರದಿಯಾಗಿದೆ.

Advertisement

ಭಾರತೀಯ ಕೋಸ್ಟ್ ಗಾರ್ಡ್ ಅಡ್ವಾನ್ಸ್‌ಡ್ ಲೈಟ್ ಹೆಲಿಕಾಪ್ಟರ್ (ಎಎಲ್‌ಎಚ್) ಧ್ರುವ್ ಭಾನುವಾರ ಗುಜರಾತ್‌ನ ಪೋರಬಂದರ್‌ನಲ್ಲಿ ದಿನನಿತ್ಯದ ತರಬೇತಿಯ ಸಮಯದಲ್ಲಿ ಪತನಗೊಂಡಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಪೋರಬಂದರ್‌ನ ಕೋಸ್ಟ್ ಗಾರ್ಡ್ ಏರ್ ಎನ್‌ಕ್ಲೇವ್‌ನಲ್ಲಿ ಈ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.

ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ತೊಂದರೆ ಉಂಟಾದ ಪರಿಣಾಮವಾಗಿ ಅಪಘಾತ ಸಂಭವಿಸಿದೆ. ಇಬ್ಬರು ಪೈಲಟ್‌ಗಳು ಮತ್ತು ಇತರ ಮೂವರು ವಿಮಾನದಲ್ಲಿದ್ದರು ಎಂದು ವರದಿ ತಿಳಿಸಿದೆ.

ಅಪಘಾತದಲ್ಲಿ ಕೆಲ ಜನರಿಗೆ ಗಾಯಗಳಾಗಿವೆ ಅವರನ್ನು ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Advertisement

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಘಟನೆ ವೇಳೆ ಹೆಲಿಕಾಪ್ಟರ್‌ನಿಂದ ಒಬ್ಬರು ಜಿಗಿದ ಪರಿಣಾಮ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಎರಡು ತಿಂಗಳ ಹಿಂದಷ್ಟೇ ಪೋರ್ ಬಂದರ್ ಬಳಿ ಅರಬ್ಬಿ ಸಮುದ್ರದಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನಗೊಂಡ ಬಳಿಕ ಈ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next