Advertisement

ಕಾರವಾರ ಲೈಟ್ ಹೌಸ್ ಬಳಿ ಬೋಟ್ ಗೆ ಬೆಂಕಿ: ಮೀನುಗಾರರ ರಕ್ಷಣೆ

02:35 PM Nov 06, 2021 | Team Udayavani |

ಕಾರವಾರ: ಕಾರವಾರ ಅರಬ್ಬೀ ಸಮುದ್ರದ ಲೈಟ್ ಹೌಸ್ ಬಳಿ ಮೀನುಗಾರಿಕಾ ಬೋಟ್ ಗೆ ಬೆಂಕಿ ಬಿದ್ದ ಘಟನೆ ನಡೆದಿದೆ.

Advertisement

ಉಡುಪಿ  ಜಿಲ್ಲೆಯ ಮಲ್ಪೆಯ  ವರದಾ ಹೆಸರಿನ ಬೋಟ್  ಬೆಂಕಿ ಅವಘಡಕ್ಕೆ ತುತ್ತಾಗಿದೆ. ಬೋಟ್ ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ರಕ್ಷಿಸಿದ್ದಾರೆ.

ಉಡುಪಿ ಜಿಲ್ಲೆಯ ಮಲ್ಪೆಯ ವರದಾ ಹೆಸರಿನ (ನೋಂದಣಿ ಸಂಖ್ಯೆಯ (IND KA 02 MM 4495)ಬೋಟ್  ಲೈಟ್ ಹೌಸ್ ನಡುಗಡ್ಡೆಯಿಂದ 10 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿತ್ತು. ಬೋಟ್  ಇಂಜಿನ್ ನಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡು ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಹೊತ್ತಿಕೊಂಡಿತ್ತು. ಅವಘಡದ ಬಗ್ಗೆ ಮಾಹಿತಿ ಪಡೆದ ನವ ಮಂಗಳೂರಿನ ಕೋಸ್ಟ್ ಗಾರ್ಡ್ ಅಧಿಕಾರಿಗಳು, ತಕ್ಷಣವೇ ಕಾರವಾರದ ‘ಸಿ 155’ ಗಸ್ತು ನೌಕೆಯಲ್ಲಿ ರಕ್ಷಣಾ ಸಿಬ್ಬಂದಿಯನ್ನು ಕಾರವಾರಕ್ಕೆ ಕಳುಹಿಸಿಕೊಟ್ಟರು.

ಬೆಂಕಿಯಿಂದ  ಧಗಿಸುತಿದ್ದ ಬೋಟ್ ನಲ್ಲಿದ್ದ  ಮೀನುಗಾರರನ್ನು  ಸನಿಹದ   ಮತ್ತೊಂದು ಮೀನುಗಾರಿಕಾ ದೋಣಿ ವಜ್ರ ಕ್ಕೆ ಸ್ಥಳೀಯ ಮೀನುಗಾರರು ರಕ್ಷಿಸಿ ರವಾನಿಸಿದರು. ಬಳಿಕ ಬೆಂಕಿಯನ್ನು ನಂದಿಸಲಾಯಿತು. ಬೋಟ್ ನಲ್ಲಿದ್ದ  ಎಲ್ಲಾ ಮೀನುಗಾರರೂ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.

Advertisement

ಬೆಂಕಿ ಹೊತ್ತಿದ್ದ ಮೀನುಗಾರಿಕಾ  ದೋಣಿಯನ್ನು ಕಾರವಾರದ ಬೈತಖೋಲ್ ಮೀನುಗಾರಿಕಾ ಬಂದರಿಗೆ ಎಳೆದು ತರಲಾಗಿದೆ. ಕರಾವಳಿ ಭದ್ರತಾ ಪಡೆಯ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next