Advertisement
ಉಡುಪಿ ಜಿಲ್ಲೆಯಲ್ಲಿ ರವಿವಾರ ಬಿಸಿಲು-ಮೋಡ ವಾತಾವರಣದ ನಡುವೆ ಹಲವೆಡೆ ಸಾಧಾರಣದಿಂದ ಉತ್ತಮ ಮಳೆ ಸುರಿದಿದೆ. ಉಡುಪಿ, ಪರ್ಕಳ, ಮಲ್ಪೆ, ಮಣಿಪಾಲ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ಅಲ್ಲಲ್ಲಿ ಕೆಲಕಾಲ ಉತ್ತಮ ಮಳೆಯಾಗಿದೆ. ಬೆಳಗ್ಗೆ ಮತ್ತು ಮತ್ತು ಸಂಜೆ ಸಿಡಿಲು ಕೂಡ ಜೋರಾಗಿತ್ತು. ಕುಂದಾಪುರದಲ್ಲಿ ಸಂಜೆ ವೇಳೆ ಉತ್ತಮ ಮಳೆಯಾಗಿದೆ. ಶನಿವಾರ ತಡರಾತ್ರಿಯೂ ಸಣ್ಣದಾಗಿ ಮಳೆಯಾಗಿದೆ.
ಹವಾಮಾನ ಇಲಾಖೆ ಸೋಮವಾರ ಕರಾವಳಿಗೆ ಎಲ್ಲೊ ಅಲರ್ಟ್ ಘೊಷಿಸಿದೆ. ಕರಾವಳಿಯ ಬಹುತೇಕ ಕಡೆ ಹಗುರದಿಂದ ಸಾಧಾರಣ/ಗುಡುಗು ಸಹಿತ ಮಳೆ ಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಮುದ್ರದಲ್ಲಿ ಗಂಟೆಗೆ 40-55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯ ದಂತೆ ಸೂಚಿಸಲಾಗಿದೆ.