Advertisement
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಜೂ.7,8,9ರಂದು ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಇದೇ ವೇಳೆ ದಕ್ಷಿಣ ಒಳನಾಡಿನಲ್ಲಿಯೂ ಉತ್ತಮ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರವಿವಾರ ಕರಾವಳಿಯ ಬಹುತೇಕ ಕಡೆಗಳಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆ ಶನಿವಾರ ತಡರಾತ್ರಿ ಸಾಧಾರಣ ಮಳೆಯಾಗಿತ್ತು. ಮಂಗಳೂರಿನಲ್ಲಿ ರವಿವಾರ ಗರಿಷ್ಠ ತಾಪಮಾನ 32.2 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 24.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.