Advertisement

ಕರಾವಳಿ: ಜೂ.6 ರಿಂದ 2-3 ದಿನ ಉತ್ತಮ ಮಳೆ ಸಾಧ್ಯತೆ

12:12 AM Jun 06, 2022 | Team Udayavani |

ಮಂಗಳೂರು: ರಾಜ್ಯ ಕರಾವಳಿಯಲ್ಲಿ ಮಳೆ ಬಿರುಸು ಪಡೆಯುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂ.6ರಿಂದ ಆರಂಭಗೊಂಡು ಎರಡು-ಮೂರು ದಿನಗಳ ಕಾಲ ಉತ್ತಮ ಮಳೆಯಾಗುವ ಸಂಭವ ಇದೆ. ಈ ವೇಳೆ ಗುಡುಗು ಸಿಡಿಲಿನಿಂದ ಕೂಡಿದ ಗಾಳಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಜೂ.7,8,9ರಂದು ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಇದೇ ವೇಳೆ ದಕ್ಷಿಣ ಒಳನಾಡಿನಲ್ಲಿಯೂ ಉತ್ತಮ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ ಕೊನೆಯ ವಾರದಲ್ಲಿ ಉತ್ತಮವಾಗಿ ಮಳೆ ಸುರಿದ ಬಳಿಕ ಕರಾವಳಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿರಲಿಲ್ಲ. ಕೃಷಿ ಕೆಲಸ ಕಾರ್ಯ ಆರಂಭಿಸಿರುವ ರೈತರು ಉತ್ತಮ ಮಳೆ ಸುರಿಯುವುದನ್ನು ಎದುರು ನೋಡುತ್ತಿದ್ದಾರೆ.

ಮೋಡ-ಬಿಸಿಲು
ರವಿವಾರ ಕರಾವಳಿಯ ಬಹುತೇಕ ಕಡೆಗಳಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆ ಶನಿವಾರ ತಡರಾತ್ರಿ ಸಾಧಾರಣ ಮಳೆಯಾಗಿತ್ತು. ಮಂಗಳೂರಿನಲ್ಲಿ ರವಿವಾರ ಗರಿಷ್ಠ ತಾಪಮಾನ 32.2 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ತಾಪಮಾನ 24.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next