Advertisement
ಪ್ರಸ್ತುತ ರಾಜ್ಯದಲ್ಲಿ 100 ವರ್ಷ ಹಳೆಯ ಸರಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮೈಸೂರು (160 ಬೆಡ್), 75 ವರ್ಷ ಹಳೆಯ ಸರಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಬೆಂಗಳೂರು (180 ಬೆಡ್), ತಾರಾನಾಥ ಸರಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಬಳ್ಳಾರಿ (150) ಕಾರ್ಯ ನಿರ್ವಹಿಸುತ್ತಿದೆ. ಹಾವೇರಿಯ ಸವಣೂರಿನಲ್ಲಿ ಸರಕಾರಿ ಆಯುರ್ವೇದ ಮಹಾವಿದ್ಯಾಲಯ (150) ಪ್ರಸ್ತಾವನೆಯಲ್ಲಿದೆ. ಶಿವಮೊಗ್ಗದಲ್ಲಿ ಆಯುಷ್ ವಿಶ್ವವಿದ್ಯಾಲಯ ನಿರ್ಮಾಣ ಹಂತದಲ್ಲಿದೆ. ಇದು ಬಿಟ್ಟರೆ ಬೇರೆ ಯಾವುದೇ ಪ್ರಸ್ತಾವನೆ ಕಂಡುಬಂದಿಲ್ಲ. ಕರಾವಳಿಯಲ್ಲಿ ಇದುವರೆಗೆ ಯಾವುದೇ ಬೇಡಿಕೆ ಇರಲಿಲ್ಲ. ಕೆಲವು ಖಾಸಗಿ ಆಯುರ್ವೇದ ಕಾಲೇಜುಗಳು ಮಾತ್ರ ಸದ್ಯ ಕಾರ್ಯನಿರ್ವಹಿಸುತ್ತಿವೆ.
Related Articles
Advertisement
ಪದವೀಧರರಿಂದ ಯತ್ನಈ ನಿಟ್ಟಿನಲ್ಲಿ ಕರಾವಳಿ ಭಾಗದ ಆಯುರ್ವೇದ ಪದವೀಧರರು ಸರಕಾರಿ ಆಯುರ್ವೇದ ಕಾಲೇಜು ಸ್ಥಾಪನೆ ಕುರಿತು ಸರಕಾರಗಳು ಪ್ರಯತ್ನಿಸುವಂತೆ ಒತ್ತಾಯ ಹೇರ ತೊಡಗಿದ್ದಾರೆ. ಹಿಂದಿನ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರಿಗೂ ಹಿಂದೆ ಮನವಿ ಕೊಡಲಾಗಿತ್ತು. ಈಗ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೂ ಮನವಿ ಸಲ್ಲಿಸಲಾಗಿದೆ. ಅನುದಾನಿತ ಕಾಲೇಜುಗಳೂ ಇಲ್ಲ
ಕರಾವಳಿ ಕರ್ನಾಟಕ ಭಾಗದಲ್ಲಿ ಖಾಸಗಿ ಆಯುರ್ವೇದ ಕಾಲೇಜುಗಳಷ್ಟೇ ಇವೆ, ಅನುದಾನಿತ ಕಾಲೇಜುಗಳೂ ಇಲ್ಲ. ಹಾಗಾಗಿ ಕರಾವಳಿ ಭಾಗದಲ್ಲಿ ಸರಕಾರಿ ಆಯುರ್ವೇದ ಕಾಲೇಜು ಹಾಗೂ ಬೋಧಕ ಆಸ್ಪತ್ರೆ ಸ್ಥಾಪಿಸಬೇಕು. ಇದರಿಂದ ಆ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾದೀತು. ಅಲ್ಲದೆ ಗರಿಷ್ಠ ಸಂಖ್ಯೆಯಲ್ಲಿರುವ ಆಯುರ್ವೇದ ಆಸಕ್ತರಿಗೂ ಉಚಿತವಾಗಿ ಚಿಕಿತ್ಸೆ ಪಡೆಯಲು ಸಾಧ್ಯ.
-ಡಾ| ಮಂಜುನಾಥ ಪೂಜಾರಿ, ಅಧ್ಯಕ್ಷರು, ಆಯುರ್ವೇದ ಸ್ನಾತಕೋತ್ತರ ಪದವೀಧರರ ಸಂಘ