Advertisement
ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ 8,177 ಮಂದಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಉಡುಪಿ ಜಿಲ್ಲೆಯಲ್ಲಿ 6004 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು ಅದರಲ್ಲಿ 5390 ಅಭ್ಯರ್ಥಿಗಳು ಪರೀಕ್ಷೆ-1 ಹಾಗೂ 5372 ಅಭ್ಯರ್ಥಿಗಳು ಪರೀಕ್ಷೆ-2ರಲ್ಲಿ ಹಾಜರಾಗಿದ್ದರು. ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಪರೀಕ್ಷೆ ನೆರವೇರಿಸಲು ಸಹಕರಿಸಿದ್ದು, ಯಾವುದೇ ರೀತಿಯ ಗೊಂದಲಗಳಾಗದಂತೆ ಜಿಲ್ಲಾಡಳಿತ ವ್ಯವಸ್ಥೆ ಕಲ್ಪಿಸಲಾಗಿತ್ತು.
Related Articles
ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಹಾಗೂ ಅಹಿತಕರ ಘಟನೆ ನಡೆಯದಂತೆ ತಡೆಯಲು ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತ ಸೆಕ್ಷನ್ 163ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.
Advertisement
“ದಕ್ಷಿಣ ಕನ್ನಡ ಜಿಲ್ಲೆಯ 18 ಪರೀಕ್ಷಾ ಕೇಂದ್ರಗಳಲ್ಲಿ ರವಿವಾರ ಗ್ರಾಮ ಆಡಳಿತ ಅಧಿಕಾರಿ (ವಿಎಒ) ಪರೀಕ್ಷೆ ಸಾಂಗವಾಗಿ ನಡೆದಿದೆ. 8,177 ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ. ಉಡುಪಿ ಜಿಲ್ಲೆಯ 13 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. ಯಾವುದೇ ಗೊಂದಲ ಇಲ್ಲದೇ ಎಲ್ಲ ಕೇಂದ್ರಗಳಲ್ಲೂ ವ್ಯವಸ್ಥಿತವಾಗಿ ಪರೀಕ್ಷೆ ನಡೆದಿದೆ. ದು ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್. ತಿಳಿಸಿದ್ದಾರೆ.”– ಡಾ| ಸಂತೋಷ್ ಕುಮಾರ್ – ಮಮತಾ ದೇವಿ ಜಿ.ಎಸ್. ಅಪರ ಜಿಲ್ಲಾಧಿಕಾರಿ- ದ.ಕ. ಮತ್ತು ಉಡುಪಿ ಜಿಲ್ಲೆ