Advertisement

ಕರಾವಳಿ: ಕೆಲವೆಡೆ ಸಾಧಾರಣ ಮಳೆ

11:07 AM Sep 18, 2018 | Team Udayavani |

ಮಂಗಳೂರು/ ಉಡುಪಿ: ಕರಾವಳಿಯ ಕೆಲವೆಡೆ ಸೋಮವಾರ ಮಳೆಯಾಗಿದೆ. ಉಳಿದಂತೆ ಮೋಡ ಕವಿದ ವಾತಾವರಣ ಇತ್ತು. ದಕ್ಷಿಣ ಕನ್ನಡದ ಸುಬ್ರಹ್ಮಣ್ಯದಲ್ಲಿ ಸೋಮ ವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಮಂಗಳೂರಿನಲ್ಲಿಯೂ ಸಾಧಾರಣ ಮಳೆಯಾಗಿದೆ. ಮೂಲ್ಕಿ ಸುತ್ತಮುತ್ತ ಬೆಳಗ್ಗೆ ಸಾಧಾರಣ ಮಳೆ ಸುರಿದಿದೆ.

Advertisement

ಉಡುಪಿ ಜಿಲ್ಲೆಯ ಕೆಲವೆಡೆ ರವಿವಾರ ರಾತ್ರಿ ಹಾಗೂ ಸೋಮವಾರ ಬೆಳಗ್ಗೆ ಹನಿ ಮಳೆ ಯಾಗಿದೆ. ಕೋಟ, ಸಾಲಿಗ್ರಾಮ ಭಾಗಗಳಲ್ಲಿ ಸೋಮವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಕಾರ್ಕಳ, ಕುಂದಾಪುರ, ಬ್ರಹ್ಮಾವರ ಮತ್ತು ಉಡುಪಿ ತಾಲೂಕಿನ ಹಲವೆಡೆ ತುಂತುರು ಮಳೆಯಾಗಿದೆ. ಉಳಿದಂತೆ ಬಿಸಿಲಿನ ವಾತಾವರಣವಿತ್ತು.

Advertisement

Udayavani is now on Telegram. Click here to join our channel and stay updated with the latest news.

Next