Advertisement
ಖಾಸಗಿ ಸಹಭಾಗಿತ್ವದಲ್ಲಿ ಮಾತ್ರವಲ್ಲ ಸರಕಾರದ ವತಿಯಿಂದಲೂ ಹೆಜ್ಜೆ ಇರಿಸಬೇಕು. ಅದರಲ್ಲೂ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ಥಳೀಯರೊಂದಿಗೆ ಸೇರಿಕೊಂಡು ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಮಾತನಾಡಿ, ರಾಜ್ಯದಲ್ಲಿ ಕೆಲವೇ ಪ್ರವಾಸೋದ್ಯಮ ತಾಣಗಳಿಗೆ ಆದ್ಯತೆ ದೊರೆಯುತ್ತಿದೆ. 25 ಸಾವಿರ ಸ್ಮಾರಕಗಳಿವೆ. ಇವುಗಳ ಪೈಕಿ ಸುಮಾರು 23 ಸಾವಿರ ಸ್ಮಾರಕಗಳು ನಿರ್ಲಕ್ಷ್ಯ ಕ್ಕೆ ಒಳಗಾಗಿವೆ. ಸ್ಮಾರಕಗಳ ಮಹತ್ವ ಅರಿತ ಗೈಡ್ ನೇಮಿಸುವ ಬಗ್ಗೆ ಚಿಂತನೆ ನಡೆದಿದೆ. ಪ್ರವಾಸಿ ತಾಣಗಳ ಸಮೀಕ್ಷೆ, ಸಂರಕ್ಷಣೆ ಇತ್ಯಾದಿಗಳ ಕುರಿತ ಜಿಲ್ಲಾವಾರು ಮಾಸ್ಟರ್ ಪ್ಲಾನ್ ಸಿದ್ಧಪಡಿಸಬೇಕು. 3 ತಿಂಗಳೊಳಗಾಗಿ ಈ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದರು.