Advertisement

Mangaluru ಕರಾವಳಿ ಉತ್ಸವ: 10 ದಿನದ ಬದಲು ಮೂರೇ ದಿನ ಸೀಮಿತ

12:32 AM Oct 28, 2023 | Team Udayavani |

ಮಂಗಳೂರು: ಕಳೆದ ಮೂರು ವರ್ಷಗಳಿಂದ ನಿಂತಿರುವ ಕರಾವಳಿ ಉತ್ಸವನ್ನು ಪ್ರಸಕ್ತ ವರ್ಷ 10 ದಿನದ ಬದಲು ಮೂರು ದಿನಗಳಿಗೆ ಸೀಮಿತಗೊಳಿಸಲಾಗುವುದು.

Advertisement

ಹೆಚ್ಚು ಗುಣಮಟ್ಟದ ಹಾಗೂ ಜನಾಕರ್ಷಣೆಯ ಕಾರ್ಯಕ್ರಮಗಳಿಗೆ ಒತ್ತು ನೀಡುವ ಬಗ್ಗೆ ಚಿಂತಿಸಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರಾವಳಿ ಉತ್ಸವದಲ್ಲಿ ಜನಾಕರ್ಷಣೀಯ ಕಾರ್ಯಕ್ರಮಗಳಿಗೆ ಒತ್ತು ನೀಡಬೇಕು. ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳನ್ನು ಜತೆಗೂಡಿಸಿ ಈಗಿನ ಅಭಿರುಚಿಗೆ ತಕ್ಕಂತೆ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳುವುದು ಉತ್ತಮವಾಗಿದೆ.

ಜಿಲ್ಲೆಯಲ್ಲಿ ಸಾಕಷ್ಟು ಶಿಕ್ಷಣ ಸಂಸ್ಥೆಗಳಿವೆ. ಅವುಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಸಾಂಸ್ಕೃತಿಕ ಉತ್ಸವವನ್ನು ನಡೆಸಬಹುದಾಗಿದೆ. ಗುಣಮಟ್ಟದ ಕಾರ್ಯಕ್ರಮಗಳಿಗೆ ಅದ್ಯತೆ ನೀಡಬೇಕು. ಹೊರಗಿನ ಕಲಾವಿದರಿಗೆ, ಸ್ಥಳೀಯರಿಗೆ ಆದ್ಯತೆ ನೀಡಬೇಕಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next