Advertisement

Mumbai aiport; ಸ್ಯಾನಿಟರಿ ಪ್ಯಾಡ್‌ಗಳಲ್ಲಿ 5.68 ಕೋಟಿ ರೂ. ಮೌಲ್ಯದ ಕೊಕೇನ್ ಪತ್ತೆ

07:22 PM Oct 13, 2023 | Team Udayavani |

ಮುಂಬಯಿ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5.68 ಕೋಟಿ ರೂ ಮೌಲ್ಯದ ಕೊಕೇನ್‌ ಸಹಿತ ಮೂವರು ಆಫ್ರಿಕನ್ ಮಹಿಳೆಯರನ್ನು ಬಂಧಿಸಲಾಗಿದೆ.

Advertisement

ಸ್ಯಾನಿಟರಿ ಪ್ಯಾಡ್‌ಗಳಲ್ಲಿ ನಿಷಿದ್ಧ ವಸ್ತುಗಳನ್ನು ಮರೆಮಾಡಿ ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು ಎಂದು ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (DRI) ಶುಕ್ರವಾರ ತಿಳಿಸಿದೆ.

ಮೂವರು ವಿದೇಶಿ ಮಹಿಳಾ ಪ್ರಯಾಣಿಕರಿಂದ ಒಟ್ಟು 568 ಗ್ರಾಂ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮೂವರು ಸ್ಯಾನಿಟರಿ ಪ್ಯಾಡ್ ಮತ್ತು ಗುದನಾಳದ ಒಳಗೆ ಮರೆಮಾಚಿ ಡ್ರಗ್ಸ್ ತರುತ್ತಿದ್ದರು.

ನಿರ್ದಿಷ್ಟ ಗುಪ್ತಚರ ವರದಿಯ ಆಧಾರದ ಮೇಲೆ, DRI ಯ ಮುಂಬೈ ಘಟಕವು ಕಳೆದ ಮೂರು ದಿನಗಳಿಂದ ಕಾರ್ಯಾಚರಣೆ ನಡೆಸಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next