ಮಡಿಕೇರಿ: ವಿಶ್ವ ಆದಿಮ ಸಂಜಾತ ಬುಡಕಟ್ಟು ಜನಾಂಗಗಳ ಹಕ್ಕುಗಳ ದಿನಾಚರಣೆಯ ಅಂಗವಾಗಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೊಡವ ನಾಶನಲ್ ಕೌನ್ಸಿಲ್ ಸಂಘಟನೆ ನಗರದಲ್ಲಿ ಧರಣಿ ಸತ್ಯಾಗ್ರಹ ನಡೆಸಿತು.
ಜಿಲ್ಲಾಧಿಕಾರಿಗಳ ಕಚೆೇರಿ ಎದುರು ಧರಣಿ ನಡೆಸಿದ ಸಿಎನ್‌ಸಿ ಪ್ರಮುಖರು ಕೊಡವ ಬುಡಕಟ್ಟು ಕುಲಕ್ಕೆ ಸಂವಿಧಾನದ 340, 342ನೇ ವಿಧಿ ಪ್ರಕಾರ ಶೆಡ್ನೂಲ್ ಲಿಸ್ಟ್‌ನಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಕುಲಶಾಸ್ತ್ರ ಅಧ್ಯಯನವನ್ನು ಪುನಾರಂಭಿಸಬೇಕು, ಕೊಡವ ಲ್ಯಾಂಡ್ ಸ್ವಾಯತ್ತತೆ ನೀಡಬೇಕು, ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ನೂಲ್‌ಗೆ ಸೇರಿಸಬೇಕು, ಕೊಡವ ಬುಡಕಟ್ಟು ಕುಲವನ್ನು ವಿಶ್ವ ಸಂಸ್ಥೆಯ ಯುನೆಸ್ಕೋದ ಇಂಟ್ಯಾಜಿಬೆಲ್ ಕಲ್ಚರಲ್ ಹೆರಿಟೇಜ್ ಪಟ್ಟಿಗೆ ಸೇರಿಸಬೆೇಕೆಂದು ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಆಗ್ರಹಿಸಿದರು.
ಕೊಡವ ಭಾಷೆಯನ್ನು ಸಂವಿಧಾನದ 8ನೆೇ ಶೆಡ್ನೂಲ್‌ಗೆ ಸೇರಿಸುವ ಕುರಿತು ಕೇಂದ್ರ ಸರಕಾರ ಸಂಸತ್‌ನಲ್ಲಿ ಭರವಸೆಯನ್ನು ನೀಡಿದ್ದು, ಇದನ್ನು ಅನುಷ್ಠಾನಗೊಳಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವ ಅಗತ್ಯವಿದೆ. ಆದ್ದರಿಂದ ಸರಕಾರ ಈ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಕೊಡವರ ಹಿತದೃಷ್ಟಿಯನ್ನು ಗಮನ ದಲ್ಲಿಟ್ಟುಕೊಂಡು ಸಿಎನ್‌ಸಿ ಸಂಘಟನೆ ಕಳೆದ 26 ವರ್ಷಗಳಿಂದ ನಿರಂತರವಾಗಿ ಶಾಂತಿಯುತ ಹೋರಾಟವನ್ನು ನಡೆಸಿಕೊಂಡು ಬಂದಿದೆ. ಆದರೆ ಬೆರಳೆಣಿಕೆಯಷ್ಟು ಮಂದಿ ಕೊಡವ ಮುಖಂಡರಿಂದಲೇ ಕೊಡವರಿಗೆ ಅನ್ಯಾಯವಾಗುತ್ತಿದೆ ಎಂದು ಎನ್.ಯು. ನಾಚಪ್ಪ ಆರೋಪಿಸಿದರು.
ಕೊಡವ ಲ್ಯಾಂಡ್ ಕೇಂದ್ರಾಡಳಿ ಪ್ರದೇಶ ಘೋಷಣೆ ಸೇರಿದಂತೆ ಸಿಎನ್‌ಸಿಯ ಪ್ರಮುಖ ಬೇಡಿಕೆಗಳು ಈಡೇರುವವರೆಗೆ ಹೋರಾಟ ಮುಂದುವರಿಯಲಿದೆ ಎಂದರು.ಸಿಎನ್‌ಸಿ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು.