ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಚುನಾವಣೆ ಸಂಬಂಧ ಯಾರೂ ಸಹ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಬಾರದು. ಉಲ್ಲಂಘಿಸಿದರೆ ಚುನಾವಣಾ ಆಯೋಗದ ನಿರ್ದೇಶ ದಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶ್ರೀವಿದ್ಯಾ ಅವರು ತಿಳಿಸಿದರು.
Advertisement
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018ರ ಸಂಬಂಧ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ಚುನಾವಣಾ ಆಯೋಗದ ನಿರ್ದೇಶನದಂತೆ ಇದೇ ಏಪ್ರಿಲ್8 ರಂದು ಮಿಂಚಿನ ನೋಂದಣಿ ಹೆಸರಿನಲ್ಲಿ ವಿಶೇಷ ಆಂದೋಲನ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ. ಅಂದು ಜಿಲ್ಲೆಯ 530 ಮತಗಟ್ಟೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಹಾಜರಿದ್ದು, ಸೇರ್ಪಡೆಗೆ ಸಂಬಂಧಿಸಿದ ನಮೂನೆ-6ನ್ನು ಸ್ವೀಕರಿಸಲಿ ದ್ದಾರೆ. ಅಲ್ಲದೇ ಅದೇ ದಿನ ತಾಲ್ಲೂಕು ಕಚೇರಿ, ಉಪ ವಿಭಾಗಾಧಿಕಾರಿಗಳ ಕಚೇರಿ ಯಲ್ಲಿಯು ಸಹ ಅರ್ಜಿಗಳನ್ನು ಸಲ್ಲಿಸಿ ಹೆಸರು ಸೇರ್ಪಡೆ ಮಾಡಿಕೊಳ್ಳ ಬಹುದು ಎಂದರು.
Related Articles
Advertisement
ಗುರುತಿನ ಚೀಟಿ ಇದ್ದರೆ ಸಾಲದು ಮತದಾರರ ಗುರುತಿನ ಚೀಟಿ ಇದ್ದರೆ ಸಾಲದು ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ಎಲ್ಲಾ ನಾಗರಿಕರು ತಮ್ಮ ಬೂತ್ ಮಟ್ಟದ ಅಧಿಕಾರಿಗಳನ್ನು, ತಾಲೂಕು ಕಚೇರಿಯನ್ನು ಮತ್ತು ಉಪ ವಿಭಾಗಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಖಾತ್ರಿ ಪಡಿಸಿ ಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು. ಮತ ದಾರರು ಹೆಸರು ಗಳನ್ನು ನೋಂದಣಿ ಮಾಡಲು ಎಪ್ರಿಲ್ 14 ಕೊನೆಯ ದಿನಾಂಕ ವಾಗಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿ ಕೊಳ್ಳುವಂತೆ ಅವರು ಕೋರಿದರು. ಎ. 7: ಮತದಾನ ಜಾಗೃತಿ ಮ್ಯಾರಥಾನ್
ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮತದಾರರನ್ನು ಪ್ರರೇಪಿಸಲು ಮ್ಯಾರಥಾನ್ ಸ್ಫರ್ಧೆಯು ಇದೇ ಏ.7 ರಂದು ಬೆಳಗ್ಗೆ 9 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಿಂದ ಪ್ರಾರಂಭಗೊಳ್ಳಲಿದೆ ಎಂದು ಜಿ.ಪಂ. ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಅವರು ತಿಳಿಸಿದರು.
ಮ್ಯಾರಥಾನ್‌ನಲ್ಲಿ 19 ರಿಂದ 40 ವರ್ಷದೊಳಗಿನ ಮಹಿಳೆಯರು ಮತ್ತು ಪುರುಷರು,41 ರಿಂದ 60 ವರ್ಷದೊಳಗಿನ ಮಹಿಳೆಯರು ಮತ್ತು ಪುರುಷರು ಹಾಗೂ 60 ವರ್ಷ ಮೇಲ್ಪಟ್ಟ ಮಹಿಳೆಯರು ಮತ್ತು ಪುರುಷರು ಈ ಗುಂಪುಗಳಾಗಿ ವಿಂಗಡಿಸಲಾಗಿದೆ.ಮ್ಯಾರಥಾನ್ ಸ್ಫರ್ಧೆಯಲ್ಲಿ ವಿಜೇತರಿಗೆ ವಯೋಮಾನವಾರು ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ವಿತರಿಸಲಾಗುವುದು. ಆಸಕ್ತರು ಏಪ್ರಿಲ್ 6 ರೊಳಗೆ ತಮ್ಮ ಹೆಸರುಗಳನ್ನು ಬಾಲಕಿಯರ ಬಾಲಮಂದಿರ, ಕೋಟೆ ಆವರಣ (ಹಳೇ ಜೈಲು ಕಟ್ಟಡ), ಮಡಿಕೇರಿ (ದೂರವಾಣಿ: 08272 220126) ಇಲ್ಲಿ ನೋಂದಾಯಿಸಬಹುದಾಗಿದೆ .