Advertisement

ನೀತಿ ಸಂಹಿತೆ: ಜಾಹೀರಾತು ಫ‌ಲಕಗಳ ತೆರವು

06:30 AM Mar 11, 2019 | |

ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಬಿಬಿಎಂಪಿ ಸಿಬ್ಬಂದಿ, ನಗರದ ವಿವಿಧ ಭಾಗಗಳಲ್ಲಿ ಅಳವಡಿಸಿರುವ ಜಾಹೀರಾತು ಫ‌ಲಕಗಳನ್ನು ತೆರವುಗೊಳಿಸಿದ್ದಾರೆ. 

Advertisement

ನಗರದ ಬಸ್‌ ನಿಲ್ದಾಣಗಳು, ಪಾದಚಾರಿ ಮೇಲ್ಸೇತುವೆಗಳು, ಕುಡಿಯುವ ನೀರಿನ ಘಟಕ, ಶೌಚಾಗೃಹಗಳ ಮೇಲೆ ಅಳವಡಿಸಲಾಗಿದ್ದ ಸರ್ಕಾರಿ ಜಾಹೀರಾತುಗಳು, ಜನಪ್ರತಿನಿಧಿಗಳ ಭಾವಚಿತ್ರವಿರುವ ಫ‌ಲಕಗಳನ್ನು ತೆರವುಗೊಳಿಸಿದ್ದಾರೆ.

ಭಾನುವಾರ ಸಂಜೆ ಚುನಾವಣಾ ಆಯೋಗ ನೀತಿ ಸಂಹಿತೆ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಯೂ ಆದ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌, ಎಲ್ಲ ಮುಖ್ಯ ಎಂಜಿನಿಯರ್‌ಗಳು, ಕಾರ್ಯನಿರ್ವಾಹಕ ಎಂಜಿನಿಯರ್‌ಗಳು, ಸಹಾಯಕ ಎಂಜಿನಿಯರ್‌ಗಳಿಗೆ ತಕ್ಷಣದಿಂದಲೇ ಜಾಹೀರಾತು ಫ‌ಲಕ ತೆರವುಗೊಳಿಸುವಂತೆ ಆದೇಶಿಸಿದ್ದರು.

ಅದರಂತೆ ಸಂಜೆ 5.30ರಿಂದ ಪಾಲಿಕೆಯ ಎಲ್ಲಾ ಎಂಟು ವಲಯಗಳಲ್ಲಿ ಸಿಬ್ಬಂದಿ ತೆರವು ಕಾರ್ಯಾಚರಣೆ ಆರಂಭಿಸಿದ್ದು, ಸಾವಿರಾರು ಜಾಹೀರಾತು ಫ‌ಲಕಗಳನ್ನು ತೆರವುಗೊಳಿಸಿದ್ದಾರೆ. ಸೋಮವಾರವೂ ತೆರವು ಕಾರ್ಯಾಚರಣೆ ಮುಂದುವರಿಯಲಿದ್ದು, ತೆರವುಗೊಳಿಸಿದ ನಂತರವೂ ಫ‌ಲಕ ಅಳವಡಿಸಿದವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವುದಾಗಿ ಬಿಬಿಎಂಪಿ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next