Advertisement
ಬರ ಪರಿಹಾರ ಕಾಮಗಾರಿಗಳ ಪರಾಮರ್ಶೆ, ಮೂಲ ಸೌಲಭ್ಯ, ಅಭಿವೃದ್ಧಿ ಕಾಮಗಾರಿ, ಸರಕು ಮತ್ತು ಸೇವೆಗಳಿಗೆ ಸಂಬಂಧಿಸಿದ ಟೆಂಡರ್ ಆಹ್ವಾನ, ಅಂತಿಮಗೊಳಿಸುವಿಕೆ, ಕಾರ್ಯಾದೇಶ ನೀಡುವಿಕೆ ಮತ್ತು ನಿಗಮ-ಮಂಡಳಿಗಳ ಶಾಸನಾತ್ಮಕ ಸಭೆಗಳನ್ನು ನಡೆಸಲು ನೀತಿ ಸಂಹಿತೆ ಸಡಿಗೊಳಿಸಿ ಆದೇಶಿಸಿದೆ.
Related Articles
-ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಸರಕಾರವು ಬರಪೀಡಿತ ಎಂದು ಘೋಷಿಸಿದೆ. ಜಿಲ್ಲಾಡಳಿತಗಳಿಂದ ತೆಗೆದುಕೊಂಡಿರುವ ಬರ ಪರಿಹಾರ ಕಾಮಗಾರಿಗಳನ್ನು ಪರಿಶೀಲಿಸುವ ತುರ್ತು ಆವಶ್ಯಕತೆ ಇದೆ. ಹೀಗಾಗಿ ಚುನಾವಣ ಆಯೋಗದ ಪರಿಶೀಲನ ಸಮಿತಿಯು ಅತಿವೃಷ್ಟಿ ಮತ್ತು ಅನಾವೃಷ್ಟಿ ಪರಿಹಾರ ಕಾಮಗಾರಿಗಳ ಪರಾಮರ್ಶೆ ಮಾಡಲು ನೀತಿ ಸಂಹಿತೆ ಸಡಿಲಗೊಳಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು, ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಪರಾಮರ್ಶನ ಸಭೆ ಅಥವಾ ವೀಡಿಯೋ ಸಂವಾದ ನಡೆಸಲು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಮತ್ತು ಮಂತ್ರಿಗಳಿಗೆ ಅನುಮತಿ ನೀಡಬೇಕು.
-ಲೋಕಸಭೆ ಚುನಾವಣೆ ಮುಗಿದರೂ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಆದರೆ, ವಿವಿಧ ಇಲಾಖೆಗಳು, ಸಂಸ್ಥೆಗಳು, ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮುಂದೆ ಟೆಂಡರ್ ಪ್ರಕ್ರಿಯೆಗಳು ಬಾಕಿ ಉಳಿದಿವೆ. ಮೂಲ ಸೌಲಭ್ಯ ಹಾಗೂ ಅಭಿವೃದ್ಧಿ ಕಾಮಗಾರಿ, ಸರಕು ಮತ್ತು ಸೇವೆಗಳ ಖರೀದಿಗೆ ಸಂಬಂಧಿಸಿದ ಟೆಂಡರ್‌ಗಳನ್ನು ಆಹ್ವಾನಿಸುವುದು, ಟೆಂಡರ್‌ಗಳನ್ನು ಅಂತಿಮಗೊಳಿಸುವುದು ಹಾಗೂ ಕಾರ್ಯಾದೇಶಗಳನ್ನು ನೀಡುವ ಕುರಿತು ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲು ಮಾದರಿ ನೀತಿ ಸಂಹಿತೆಯಿಂದ ಸಾಮಾನ್ಯ ವಿನಾಯಿತಿ ನೀಡಬೇಕು.
– ಸರಕಾರದ ವಿವಿಧ ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು ಮತ್ತು ಇತರ ಶಾಸನಾತ್ಮಕ ಸಂಸ್ಥೆಗಳಲ್ಲಿ ಶಾಸನಾತ್ಮಕ ಸಭೆಗಳನ್ನು ನಡೆಸುವ ಸಲುವಾಗಿ ನೀತಿ ಸಂಹಿತೆ ಸಡಿಲಗೊಳಿಸಲು ಮನವಿ.
Advertisement
ಚುನಾವಣ ಆಯೋಗ ಸರಕಾರಕ್ಕೆ ಹೇಳಿದ್ದೇನು?-ಶಾಸನಾತ್ಮಕ ಸಂಸ್ಥೆಗಳು ಶಾಸನಾತ್ಮಕ ಸಭೆಗಳನ್ನು ನಡೆಸುವುದಕ್ಕೆ ಆಯೋಗದ ಆಕ್ಷೇಪವಿಲ್ಲ. ಆದರೆ, ಸ್ಥಳೀಯ ಸಂಸ್ಥೆಗಳು, ಪಂಚಾಯತ್‌ಗಳು ಯಾವುದೇ ಹೊಸ ನೀತಿ ನಿರ್ಧಾರಗಳನ್ನು ಘೋಷಿಸುವಂತಿಲ್ಲ.
– ಪ್ರತಿನಿತ್ಯದ ಆಗು-ಹೋಗುಗಳಿಗೆ ಸಂಬಂಧಿಸಿದ ನಿರ್ವಹಣೆಗಳನ್ನು ಮಾಡಲು ಸಭೆ ನಡೆಸಬಹುದು, ತುರ್ತು ವಿಷಯಗಳಿಗೆ ಸಂಬಂಧಿಸಿದಂತೆ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು.
-ರಾಜಕೀಯ ಲಾಭ ಪಡೆದುಕೊಳ್ಳುವಂತಹ ತೀರ್ಮಾನಗಳನ್ನು ತೆಗೆದುಕೊಳ್ಳುವಂತಿಲ್ಲ. ಈ ಷರತ್ತಿಗೆ ಒಳಪಟ್ಟು ಸಭೆಗಳನ್ನು ನಡೆಸಬಹುದು. ಅಂತಹ ಅಥವಾ ಅದಕ್ಕೆ ಸಂಬಂಧಿಸಿದ ಯಾವುದೇ ಸಭೆಗಳನ್ನು ಚುನಾವಣ ಪ್ರಕ್ರಿಯೆಗಳು ಪೂರ್ಣಗೊಂಡ ಅನಂತರವಷ್ಟೇ ನಡೆಸಬೇಕು.