Advertisement
ಪ್ರಕರಣ ಸಂಬಂಧ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಾರವಾಳ ಗ್ರಾಮದ ಪ್ರವೀಣ್ ಕುಮಾರ್ ಪಾಟೀಲ್ ಕಲಬುರಗಿಯ ಸೈಬರ್ ಅಪರಾಧ ಠಾಣೆಯಲ್ಲಿ (ಸೆನ್) ದಾಖಲಿಸಿರುವ ದೂರು ಹಾಗೂ ಅದರ ಸಂಬಂಧ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ನ್ಯಾಯಿಕ ಪ್ರಕ್ರಿಯೆಗಳನ್ನು ರದ್ದುಪಡಿಸುವಂತೆ ಕೋರಿ ನಡ್ಡಾ ಹಾಗೂ ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.
ಕಳೆದ ಲೋಕಸಭೆ ಚುನಾವಣೆ ವೇಳೆ ಸಮಾಜದಲ್ಲಿ ಧಾರ್ಮಿಕ ದ್ವೇಷ ಹರಡಲು ಪ್ರಯತ್ನಿಸಿದ ಮತ್ತು ಚುನಾವಣ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧದ ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ. ಪ್ರಕರಣ ಸಂಬಂಧ ಅಧೀನ ನ್ಯಾಯಾಲಯಗಳ ವಿಚಾರಣೆ ರದ್ದುಪಡಿಸುವಂತೆ ಕೋರಿ ಸಿ.ಟಿ. ರವಿ ಸಲ್ಲಿಸಿದ್ದ 2 ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಾಂತರ ತಡೆ ನೀಡಿ ಆದೇಶಿಸಿದೆ.