Advertisement

ನೀತಿ ಸಂಹಿತೆ ಶಾಸಕರಿಗೂ ಒಂದೇ, ಪ್ರಧಾನಿಗೂ ಒಂದೇ: ಸಿದ್ದರಾಮಯ್ಯ

09:08 PM Apr 02, 2023 | Team Udayavani |

ಮೈಸೂರು: ನೀತಿ ಸಂಹಿತೆ ಶಾಸಕರಿಗೂ ಒಂದೇ, ಪ್ರಧಾನಿಗೂ ಒಂದೇ ಆಗಿರುತ್ತದೆ. ಆದ್ದರಿಂದ ರಾಜ್ಯಕ್ಕೆ ಪ್ರಧಾನಿ ಮೋದಿ ಬರಲು ಚುನಾವಣಾ ಆಯೋಗ ಅನುಮತಿ ನೀಡಿದೆಯೇ? ನೀತಿ ಸಂಹಿತೆ ಜಾರಿಯಾದ ಮೇಲೆ ಪ್ರಧಾನಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೇಗೆ ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

Advertisement

ಎ .9ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಅವರು ಆಗಮಿಸುತ್ತಿರುವ ಕುರಿತು ನಗರದ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ದಲ್ಲಿ ಚುನಾವಣೆ ಘೋಷಣೆಯಾದ ಮೇಲೆ ಯಾವುದೇ ಸರ್ಕಾರಿ ಕಾರ್ಯಕ್ರಮಗಳನ್ನು ಮಾಡಬಾರದು. ನೀತಿ ಸಂಹಿತೆ ಎಲ್ಲರಿಗೂ ಒಂದೇ ಎಂದು ಹೇಳಿದರು.

ಮೀಸಲಾತಿ ಪರಿಷ್ಕರಣೆಯಿಂದ ಬಿಜೆಪಿಗೆ ಅನುಕೂಲ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇದು ಯಾವುದೇ ಪೂರ್ವತಯಾರಿ ಇಲ್ಲದೆ ಚುನಾವಣೆಗಾಗಿ ತಂದಿರುವ ವಿಷಯವಾಗಿದೆ. ನಿಯಮ ಮೀರಿ ಶೇ. 6ರಷ್ಟು ಮೀಸಲು ಹೆಚ್ಚಳ ಮಾಡಲಾಗಿದೆ. ಇದಕ್ಕೆ ಸಂವಿಧಾನ ತಿದ್ದುಪಡಿ ಆಗಬೇಕಿತ್ತು. ಸದನದಲ್ಲಿ ಈ ಬಗ್ಗೆ ಚರ್ಚೆ ನಡೆಯಬೇಕಿತ್ತು. ಇದ್ಯಾವುದನ್ನೂ ಇವರು ಮಾಡಿಯೇ ಇಲ್ಲ. ಈ ಕಾರಣದಿಂದ ಇದು ಕೋರ್ಟಿನಲ್ಲಿ ನಿಲ್ಲುವುದಿಲ್ಲ ಎಂದು ಹೇಳಿದರು.

ಹೈಕಮಾಂಡ್‌ ತೀರ್ಮಾನ: ಮೈಸೂರಿನ ಚಾಮರಾಜ, ಚಾಮುಂಡೇಶ್ವರಿ ಕ್ಷೇತ್ರಗಳ ಕಾಂಗ್ರೆಸ್‌ ಟಿಕೆಟ್‌ ಹಂಚಿಕೆ ವಿಷಯ ಮಂಗಳವಾರ ಇತ್ಯರ್ಥವಾಗಲಿದೆ. ಸಭೆಯ ಬಳಿಕ ಕಾಂಗ್ರೆಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಆಗಲಿದೆ. ನಾನು ಕೋಲಾರದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಹೈಕಮಾಂಡ್‌ ತೀರ್ಮಾನ ಮಾಡಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next