Advertisement

ನೀತಿ ಸಂಹಿತೆ ಜಾರಿ-ತೆರವುಗೊಳ್ಳದ ಪ್ರಚಾರ ಫ್ಲೆಕ್ಸ್‌

02:54 PM May 26, 2022 | Team Udayavani |

ಗಜೇಂದ್ರಗಡ: ವಿಧಾನ ಪರಿಷತ್‌ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಪಟ್ಟಣದ ಕೆಲ ಭಾಗಗಳಲ್ಲಿ ಸರಕಾರದ ಯೋಜನೆಗಳ ಪ್ರಚಾರದ ಫ್ಲೆಕ್ಸ್‌ಗಳು ರಾರಾಜಿಸುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Advertisement

ಕೇಂದ್ರ ಚುನಾವಣಾ ಆಯೋಗ ವಿಧಾನ ಪರಿಷತ್‌ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಿದ್ದು, ಮೇ 12 ರಂದು ಚುನಾವಣಾ ಅಧಿಸೂಚನೆ ಹೊರಡಿಸಿ, ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ.

ಮಾದರಿ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಜಿಲ್ಲಾಮಟ್ಟದಲ್ಲಿ ತಂಡ ರಚನೆ ಮಾಡಲಾಗಿದೆ. ತಾಲೂಕಿನ ಸಾರ್ವಜನಿಕ ಸ್ಥಳಗಳು, ಆಸ್ತಿಗಳಿಗೆ ಯಾವುದೇ ರೀತಿಯ ಹಾನಿಯಾಗದಂತೆ ಹಾಗೂ ನಾಶಪಡಿಸಿದಲ್ಲಿ ಚುನಾವಣಾ ಕಾಯ್ದೆ ಹಾಗೂ ಸಿಆರ್‌ ಪಿಸಿ ಕಾಯ್ದೆಯನ್ವಯ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ ಬ್ಯಾನರ್‌, ಬಂಟಿಂಗ್ಸ್‌, ಚುನಾವಣಾ ಪ್ರಚಾರ ಸಾಮಾಗ್ರಿಗಳು ಇದ್ದಲ್ಲಿ ಅವುಗಳನ್ನು ಕೂಡಲೇ ತೆರವುಗೊಳಿಸಲು ಚುನಾವಣಾ ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಆದರೆ, ಪಟ್ಟಣದ ಹೃದಯ ಭಾಗವಾದ ಶ್ರೀ ಕಾಲಕಾಲೇಶ್ವರ ವೃತ್ತ, ರೋಣ ರಸ್ತೆಗಳಲ್ಲಿ ಸರ್ಕಾರದ ಯೋಜನೆಗಳ ಪ್ರಚಾರ ಬ್ಯಾನರ್‌ಗಳನ್ನು ತೆರವು ಮಾಡಿಲ್ಲ.

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಜೂನ್‌ ತಿಂಗಳಲ್ಲಿ ನಡೆಯಲಿದ್ದು, ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೂ ಪಟ್ಟಣದಲ್ಲಿ ಸರ್ಕಾರ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಅವುಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ತೆರವುಗೊಳಿಸಲು ಮುಂದಾಗಿಲ್ಲ. ಮೇ 12 ರಿಂದ ಜೂ.17ರ ವರೆಗೂ ನೀತಿ ಸಂಹಿತೆ ಜಾರಿಯಲ್ಲಿರಲಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಗಮನ ಹರಿಸಿ ವಿಧಾನ ಪರಿಷತ್‌ ಚುನಾವಣೆಯ ನೀತಿ ಸಂಹಿತೆ ಕಟ್ಟುನಿಟ್ಟಿನ ಜಾರಿಗೆ ಕ್ರಮ ಕೈಗೊಳ್ಳಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next