Advertisement
ಲೋಕಸಭೆ ಚುನಾವಣೆಯ ಮಾದರಿ ನೀತಿ ಸಂಹಿತೆ ಸಡಿಲಗೊಳಿಸಿ ನೌಕರರ ವರ್ಗಾವಣೆಗೆ ಚುನಾವಣಾ ಆಯೋಗ ಈಗಾಗಲೇ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿತ್ತು. ಇದಾದ ಬೆನ್ನಲ್ಲೇ ರಾಜ್ಯದ 62 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನು ಆಯೋಗ ಘೋಷಣೆ ಮಾಡಿತ್ತು.
Related Articles
Advertisement
ಅದನ್ನು ಸಂಪೂರ್ಣವಾಗಿ ನೀತಿ ಸಂಹಿತೆ ಮುಗಿದ ನಂತರವೇ ಮಾಡಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ, ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಇಲಾಖೆಯ ಉನ್ನತಾಧಿಕಾರಿಗಳು ಈಗಾಗಲೇ ಸಭೆ ಸೇರಿ ಅಧಿಸೂಚನೆಯನ್ನು ಹೊಸದಾಗಿ ಹೊರಡಿಸಬೇಕೇ ಅಥವಾ ಈಗಾಗಲೇ ಬಂದಿರುವ ಅರ್ಜಿಗಳ ಆಧಾರದಲ್ಲೇ ಮುಂದುವರಿಯಬೇಕೇ ಎಂಬುದರ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ವರ್ಗಾವಣೆ ಪ್ರಕ್ರಿಯೆ ಮಾರ್ಗಸೂಚಿ ಸಿದ್ಧಪಡಿಸಲು ಈ ನೀತಿ ಸಂಹಿತೆ ಅಡ್ಡಿ ಬರುವುದಿಲ್ಲ. ಆದರೆ, ಹುದ್ದೆಯಿಂದ ತೆರವುಗೊಳಿಸಿ, ಹೊಸ ಸ್ಥಳಕ್ಕೆ ನಿಯೋಜನೆ ಮಾಡುವ ಆದೇಶ ನೀಡಲು ಸಾಧ್ಯವಾಗುವುದಿಲ್ಲ.-ಎನ್.ಆರ್.ನಾಗರಾಜ, ಅಧೀನ ಕಾರ್ಯದರ್ಶಿ, ರಾಜ್ಯ ಚುನಾವಣಾ ಆಯೋಗ.