Advertisement

ನೀತಿ ಸಂಹಿತೆ ಹಿನ್ನೆಲೆ: ಸರ್ಕಾರಿ ಬಿಟ್ಟು ಖಾಸಗಿ ಕಾರಿನಲ್ಲಿ ಪ್ರಯಾಣಿಸಿದ ಸಿದ್ದರಾಮಯ್ಯ

12:42 PM Mar 29, 2023 | Team Udayavani |

ಮೈಸೂರು : ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಗೊಂಡ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಬರುವಾಗ ಸರ್ಕಾರಿ ಕಾರು ಬಳಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರ್ಯಕ್ರಮ ಮುಗಿಯುವುದರೊಳಗೆ ಖಸಗಿ ಕಾರನ್ನು ಬಳಸಿದ್ದಾರೆ.

Advertisement

ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಗೊಂಡ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ನವರಿಗೆ ನೀಡಿದ್ಧ KA01GA7002 ಸಂಖ್ಯೆಯ ಫಾರ್ಚ್ಯೂನರ್ ಸರ್ಕಾರಿ ಕಾರನ್ನು ಅಧಿಕಾರಿಗಳು ವಾಪಸ್ ಪಡೆದಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ಬಿಜೆಪಿ ಕಳೆದ ಬಾರಿಯಂತೆ ಈ ಬಾರಿಯೂ ಮ್ಯಾಚ್ ಫಿಕ್ಸಿಂಗ್ ಮಾಡುತ್ತದೆ: ಸಿದ್ದರಾಮಯ್ಯ

ಸರ್ಕಾರಿ ಕಾರಿನಲ್ಲಿದ್ದ ಸೂಟ್ ಕೇಸ್ ಸೇರಿದಂತೆ ಇತರ ವಸ್ತುಗಳು  ವಸ್ತುಗಳನ್ನು ಖಾಸಗಿ ಕಾರಿಗೆ ಸಿದ್ದರಾಮಯ್ಯರ ಆಪ್ತರು ವರ್ಗಾಯಿಸಿಕೊಂಡಿದ್ದಾರೆ.

ಮೈಸೂರಿನ ರಾಮಕೃಷ್ಣನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದಾರೆ. ಸಿದ್ದರಾಮಯ್ಯ ಒಳಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿರುವಾಗಲೇ ಇತ್ತ ಸರ್ಕಾರಿ ಕಾರನ್ನು ಸರ್ಕಾರಿ ಅಧಿಕಾರಿಗಳು ವಾಪಸ್ ಪಡೆದುಕೊಂಡಿದ್ದಾರೆ.

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next