ಬೆಂಗಳೂರು: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಎರಡು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ.
ಬಿಎಸ್‌ವೈ ಪರ ವಕೀಲ ಸಂದೀಪ್ ಪಾಟೀಲ್, ರಾಜಕೀಯ ದುರುದ್ದೇಶದಿಂದ ತಮ್ಮ ಕಕ್ಷಿದಾರರ ವಿರುದಟಛಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಸೂಕ್ತ ಸಾಕ್ಷಿಗಳಿಲ್ಲದೆ, ದೋಷಾರೋಪ ಪಟ್ಟಿ ಕೂಡ ಸಲ್ಲಿಸಲಾಗಿದೆ. ಹೀಗಾಗಿ ತಮ್ಮ ಕಕ್ಷಿದಾರರನ್ನು ದೋಷಮುಕ್ತಗೊಳಿಸಬೇಕೆಂದು ವಾದಿಸಿದರು. ವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಬಿ.ವಿ.ಪಾಟೀಲ್ ಅವರು, ಆರೋಪಿಯ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಯಡಿಯೂರಪ್ಪ ಅವರನ್ನು ದೋಷಮುಕ್ತಗೊಳಿಸಿ ಆದೇಶಿಸಿದರು.
ಗುಂಡ್ಲುಪೇಟೆ ಉಪ ಚುನಾವಣೆ ಪ್ರಚಾರದ ವೇಳೆ ಯಡಿಯೂರಪ್ಪ ಅವರು, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಗುಂಡ್ಲುಪೇಟೆ ಕ್ಷೇತ್ರವನ್ನು ದತ್ತು ಪಡೆದುಕೊಳ್ಳುವುದಾಗಿ ಹೇಳಿದ್ದರು. ಮತ್ತೂಂದು ಪ್ರಕರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ಚಿಕ್ಕಪ್ಪಶೆಟ್ಟಿ ಎಂಬುವರ ಕುಟುಂಬಕ್ಕೆ ಯಡಿಯೂರಪ್ಪ ವೈಯಕ್ತಿಕವಾಗಿ 1 ಲಕ್ಷ ರೂ. ಹಣ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿತ್ತು.
ಖುದ್ದು ಹಾಜರಾದ ಬಿಎಸ್‌ವೈ: ತಮ್ಮ ವಿರುದ್ಧ ದಾಖಲಾದ ಎರಡು ನೀತಿ ಸಂಹಿತೆ ಪ್ರಕರಣಗಳ ಸಂಬಂಧ ಯಡಿಯೂರಪ್ಪ
ಗುರುವಾರ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿದ್ದರು.