Advertisement

ನೀತಿ ಸಂಹಿತೆ ತಾರತಮ್ಯ: ಆಯೋಗಕ್ಕೆ ನೋಟಿಸ್‌

10:51 PM Nov 27, 2019 | Team Udayavani |

ಬೆಂಗಳೂರು: ಉಪ ಚುನಾವಣೆ ನಡೆಯುತ್ತಿರುವ ರಾಜ್ಯದ 15 ವಿಧಾನಸಭೆ ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಐದು ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ಮತ್ತು ಒಂಭತ್ತು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಆಯಾ ಕ್ಷೇತ್ರಗಳಿಗೆ ಮಾತ್ರ ಅನ್ವಯವಾಗುವಂತೆ ನೀತಿ ಸಂಹಿತೆ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಕುರಿತು ಚುನಾವಣೆ ಆಯೋಗಕ್ಕೆ ಹೈಕೋರ್ಟ್‌ ತುರ್ತು ನೋಟಿಸ್‌ ಜಾರಿಗೊಳಿಸಿದೆ.

Advertisement

ಈ ಕುರಿತಂತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕನಕಹಳ್ಳಿಯ ನಿವಾಸಿ ಶಿವರಾಮ ಗೋಪಾಲಕೃಷ್ಣ ಗಾಂವ್‌ಕರ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ಹಾಗೂ ನ್ಯಾ. ಪ್ರದೀಪ್‌ ಸಿಂಗ್‌ ಯೆರೂರ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.

ವಾದ ಆಲಿಸಿದ ನ್ಯಾಯಪೀಠ, ಕೇಂದ್ರ ಚುನಾವಣೆ ಆಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮತ್ತು ಕೇಂದ್ರ ಕಾನೂನು ಸಚಿವಾಲಯದ ಕಾರ್ಯದರ್ಶಿಗೆ ತುರ್ತು ನೋಟಿಸ್‌ ಜಾರಿಗೆ ಆದೇಶಿಸಿ ವಿಚಾರಣೆ ಮುಂದೂಡಿತು. ಅರ್ಜಿದಾರರ ಪರ ವಕೀಲ ಎಚ್‌. ಸುನೀಲ್‌ ಕುಮಾರ್‌ ವಾದ ಮಂಡಿಸಿ, ರಾಜ್ಯದ 15 ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಿ 2019ರ ಸೆ.27ರಂದು ಚುನಾವಣೆ ಆಯೋಗ ಅಧಿಸೂಚನೆ ಹೊರಡಿಸಿದೆ.

ಅದರಂತೆ, ನೀತಿ ಸಂಹಿತೆ 2019ರ ಡಿಸೆಂಬರ್‌ 11ರಂದು ಕೊನೆಗೊಳ್ಳಲಿದೆ. ಅಥಣಿ, ಕಾಗವಾಡ, ಗೋಕಾಕ, ವಿಜಯನಗರ, ವಿಜಯಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್‌, ಶಿವಾಜಿನಗರ ಮತ್ತು ಹುಣಸೂರು ವಿಧಾನಸಭೆ ಕ್ಷೇತ್ರಗಳ ಸಂಬಂಧ ಆಯಾ ಕ್ಷೇತ್ರಕ್ಕೆ ಅನ್ವಯಾಗುವಂತೆ ಮಾತ್ರ ನೀತಿ ಸಂಹಿತೆ ಜಾರಿ ಮಾಡಲಾಗಿದೆ. ಆದರೆ, ಯಲ್ಲಾಪುರ, ಹಿರೇಕೆರೂರು, ರಾಣಿಬೆನ್ನೂರು, ಚಿಕ್ಕಬಳ್ಳಾಫ‌ುರ, ಹೊಸಪೇಟೆ ಮತ್ತು ಕೆ.ಆರ್‌.ಪೇಟೆ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಡೀ ಜಿಲ್ಲೆಗೆ ಅನ್ವಯವಾಗುವಂತೆ ನೀತಿ ಸಂಹಿತೆ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ಈ ಕುರಿತು ಆಯೋಗವನ್ನು ಪ್ರಶ್ನಿಸಿದರೆ, ರಾಜ್ಯದ ರಾಜಧಾನಿ, ಮೆಟ್ರೋಪಾಲಿಟನ್‌ ಸಿಟಿ ಪಾಲಿಟನ್‌ ಸಿಟಿ, ಪಾಲಿಕೆ ವ್ಯಾಪ್ತಿಯಲ್ಲಿ ಉಪ ಚುನಾವಣೆ ನಡೆದರೆ, ಆ ನಿರ್ದಿಷ್ಟ ಕ್ಷೇತ್ರದಲ್ಲಿ ಮಾತ್ರ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಅದನ್ನು ಹೊರತುಪಡಿಸಿ ಇತರೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದರೆ, ಆಗ ಇಡೀ ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಈ ಕುರಿತ ಮಾರ್ಗಸೂಚಿಗಳನ್ನು ಹಲವು ವರ್ಷಗಳಿಂದ ಪಾಲಿಸಲಾಗುತ್ತಿದೆ ಎಂದು ಸಮಜಾಯಿಷಿ ನೀಡಲಾಗಿದೆ ಎಂದು ಅರ್ಜಿದಾರರು ದೂರಿದ್ದಾರೆ.

Advertisement

ಆದ್ದರಿಂದ, ತಾರತಮ್ಯದಿಂದ ನೀತಿಯಿಂದ ಕೂಡಿ ರುವ ಮಾರ್ಗಸೂಚಿ ಸರಿಪಡಿಸುವಂತೆ ಚುನಾವಣೆ ಆಯೋಗಕ್ಕೆ ನಿರ್ದೇಶಿಸಬೇಕು. ಸದ್ಯ ಉತ್ತರ ಕನ್ನಡ, ಹಾವೇರಿ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯಗೆ ಸಂಬಂಧಿಸಿದಂತೆ ಇಡೀ ಜಿಲ್ಲೆಗೆ ಅನ್ವಯಿಸಿರುವ ನೀತಿ ಸಂಹಿತೆ ತಿದ್ದುಪಡಿ ಮಾಡಲು ನಿರ್ದಶಿಸವಂತೆ ಅರ್ಜಿದಾರರು ಕೋರಿದ್ದಾರೆ.

ಖುಲಾಸೆಗೊಂಡ ಕ್ರಿಮಿನಲ್‌ ಕೇಸ್‌ ಮರು ಪರಿಶೀಲನೆ
ಬೆಂಗಳೂರು: ವಿಶೇಷ ಕಾಯ್ದೆಯಡಿ ದಾಖಲಾಗಿ ಖುಲಾಸೆಗೊಂಡ ಪ್ರಕರಣಗಳಿಗೆ ವಿನಾಯ್ತಿ ನೀಡಿ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಹಿಂಪಡೆದು ಹೊಸ ಆದೇಶ ಹೊರಡಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಬುಧವಾರ ಹೇಳಿದೆ. ಈ ಕುರಿತು ವಕೀಲ ಎಸ್‌. ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎ.ಎಸ್‌. ಓಕಾ ಹಾಗೂ ನ್ಯಾ. ಪ್ರದೀಪ್‌ ಸಿಂಗ್‌ ಯೆರೂರ್‌ ಅವರಿದ್ದ ವಿಭಾಗೀಯ ಪೀಠಕ್ಕೆ ಈ ಮಾಹಿತಿ ಸಲ್ಲಿಸಿದೆ.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರಾದ ಪಿ.ಬಿ ಅಚ್ಚಪ್ಪ ಅವರು, ವಿನಾಯ್ತಿ ನೀಡಿ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಹಿಂಪಡೆದು ಹೊಸ ಆದೇಶ ಹೊರಡಿಸಲಾಗು ವುದು, ಇದಕ್ಕಾಗಿ 15 ದಿನ ಕಾಲಾವಕಾಶ ಬೇಕೆಂದು ಮನವಿ ಮಾಡಿದರು.

“ಸರ್ಕಾರದ ಎಲ್ಲ ವಿಭಾಗಗಳಲ್ಲಿ, ಸಮಿತಿ ಗಳಲ್ಲಿ, ನಿಗಮಗಳಲ್ಲಿ, ಲೋಕಾಯು ಕ್ತದಲ್ಲಿ ವಿಶೇಷ ಕಾಯ್ದೆಗಳಡಿ ಯಾವುದೇ ಎಫ್ಐಆರ್‌ ಮತ್ತು ಚಾರ್ಜ್‌ಶೀಟ್‌ ದಾಖಲಾಗಿದ್ದರೆ ಅಂತಹ ಪ್ರಕರಣಗಳ ತನಿಖೆ ಮತ್ತು ಪ್ರಾಸಿಕ್ಯೂಷನ್‌ ವೇಳೆ ಪರಿಗಣಿಸಲಾದ ಅಂಶಗಳನ್ನು ರಾಜ್ಯ ಮಟ್ಟದ ಕ್ರಿಮಿನಲ್‌ ಖುಲಾಸೆ ಸಮಿತಿಯು ಮರು ಪರಿಶೀಲನೆಗೊಳಪಡಿಸಲಿದೆ. ಈ ಕುರಿತು ರಾಜ್ಯ ಸರ್ಕಾರ ಮಾರ್ಪಡಿತ ಆದೇಶ ಹೊರಡಿಸ ಬೇಕಿದ್ದು, ಸಿಎಂ ಅನುಮೋದನೆ ಪಡೆಯಬೇಕಿದೆ. ಇದ ಕ್ಕಾಗಿ ಕಾಲಾವಕಾಶ ಕೇಳಿದ್ದು ಪೀಠ 3 ವಾರ ಅವಕಾಶ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next