Advertisement

ಮುಖ್ಯಮಂತ್ರಿ ಮುಂದೆ ಆರು ಪ್ರಶ್ನೆ ಇಟ್ಟ ಕಾಂಗ್ರೆಸ್‌

07:59 PM Jan 28, 2022 | Team Udayavani |

ಬೆಂಗಳೂರು: ಮುಖ್ಯಮಂತ್ರಿಯಾಗಿ ಆರು ತಿಂಗಳು ಪೂರೈಸಿರುವ ಬಸವರಾಜ ಬೊಮ್ಮಾಯಿ ಅವರ ಮುಂದೆ ಕರ್ನಾಟಕ ಕಾಂಗ್ರೆಸ್‌ ಟ್ವೀಟ್‌ ಮೂಲಕ ಆರು ಪ್ರಶ್ನೆಗಳಿಟ್ಟು ಉತ್ತರ ನೀಡುವಂತೆ ಒತ್ತಾಯಿಸಿದೆ.

Advertisement

ತಿಂಗಳು ಆರು ಓನ್ಲಿ ದೆಹಲಿ ಟೂರು ಎಂಬ ಟ್ಯಾಗ್‌ಲೈನ್‌ನಡಿ ಬಸವರಾಜ ಬೊಮ್ಮಾಯಿ ಅವರೇ ನಿಮ್ಮ ಸರ್ಕಾರಕ್ಕೆ ಆರು ತಿಂಗಳಾಗಿದೆ. ನಿಮ್ಮ ಸಚಿವರ ಕೆಲಸಗಳ ಬಗ್ಗೆ ನಿಮಗೆ ತೃಪ್ತಿ ಇದೆಯೇ?

ಅಸಮಾಧಾನದಿಂದ ಒಲ್ಲದ ಖಾತೆ ನಿಭಾಯಿಸುತ್ತಿರುವವರು, ಉಸ್ತುವಾರಿಗಾಗಿ ಕಿತ್ತಾಡುವವರು, ತಮ್ಮದೇ ಶಾಸಕರೊಂದಿಗೆ ಮುನಿಸಿಟ್ಟುಕೊಂಡ ಸಚಿವರು ನಿಮ್ಮಲ್ಲಿದ್ದಾರೆ. ಅವರ ಕೆಲಸಗಳ ಬಗ್ಗೆ ಸಮಾಧಾನವಿದೆಯೇ?

ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರುವ ಬಸವರಾಜ ಬೊಮ್ಮಾಯಿ ಅವರು ಆರ್ಥಿಕ ಸ್ಥಿತಿ ವೃದ್ಧಿಸುವಲ್ಲಿ ಕೈಗೊಂಡ ಕ್ರಮಗಳೇನು?,

ಆರ್ಥಿಕ ಶಿಸ್ತು ಕಾಪಾಡಲು ರೂಪಿಸಿದ ಯೋಜನೆಗಳೇನು? ತೆರಿಗೆ ಪಾಲು, ಅನುದಾನ, ಪರಿಹಾರ ಮುಂತಾದುವುಗಳನ್ನು ಕೇಂದ್ರದಿಂದ ತರುವಲ್ಲಿ ಮಾಡಿದ ಪ್ರಯತ್ನಗಳೇನು? ಎಂದು ಪ್ರಶ್ನಿಸಲಾಗಿದೆ.

Advertisement

ಇದನ್ನೂ ಓದಿ:ಬಿಜೆಪಿ ಸಂಚು;ಹೆಲಿಕಾಪ್ಟರ್ ನಲ್ಲಿ ಮುಜಾಫರ್ ನಗರಕ್ಕೆ ತೆರಳಲು ಅವಕಾಶ ನೀಡುತ್ತಿಲ್ಲ; ಅಖಿಲೇಶ್

ಸಿಗದ ನೆರೆ ಪರಿಹಾರ, ದೊರಕದ ಕೊರೊನಾ ಪರಿಹಾರ, ಕುಂಟುವ ಆಡಳಿತ ಯಂತ್ರ, ಇಲ್ಲದ ವಸತಿ ಯೋಜನೆಗಳು. ಜನರ ಸಮಸ್ಯೆ ಹಲವರಿದ್ದರೂ ಒಂದೇ ಒಂದು ಜನತಾ ದರ್ಶನ ಕಾರ್ಯಕ್ರಮ ಮಾಡಿಲ್ಲವೇಕೆ?

ಉಪಯೋಗವಿಲ್ಲದ ದೆಹಲಿ ದರ್ಶನಕ್ಕೆ ಹೋಗುವ ತಮಗೆ ಜನತಾದರ್ಶನಕ್ಕೆ ಸಮಯವಿರಲಿಲ್ಲವೇ?

ಬಿಬಿಎಂಪಿಯಲ್ಲಿ ಭ್ರಷ್ಟಾಚಾರ, ಬಿಡಿಎಯಲ್ಲಿ ಭ್ರಷ್ಟಾಚಾರ, ನೇಮಕಾತಿಯಲ್ಲಿ ಭ್ರಷ್ಟಾಚಾರ, ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಗುತ್ತಿಗೆಯಲ್ಲಿ ಶೇ.40 ಕಮೀಶನ್‌ ಭ್ರಷ್ಟಾಚಾರ, ಈ ಸರ್ಕಾರದಲ್ಲಿ ಎಲ್ಲೆಲ್ಲೂ ಭ್ರಷ್ಟಾಚಾರವೇ. ಬಸವರಾಜ ಬೊಮ್ಮಾಯಿ ಅವರೇ ಆರು ತಿಂಗಳಲ್ಲಿ ಭ್ರಷ್ಟಾಚಾರ ನಿಗ್ರಹಕ್ಕೆ ಕೈಗೊಂಡ ಕ್ರಮಗಳೇನು?

ತಮ್ಮ ಅಧಿಕಾರದ ಆರು ತಿಂಗಳಲ್ಲಿ ಹಾಗೂ ನಿಮ್ಮ ಡಬಲ್‌ ಇಂಜಿನ್‌ ಸರ್ಕಾರದಲ್ಲಿ ಕೇಂದ್ರದಿಂದ ಯಾವ್ಯಾವ ಯೋಜನೆಗೆ ಎಷ್ಟು ಅನುದಾನ ತಂದಿದ್ದೀರಿ? ಜಿಎಸ್‌ಟಿ ಬಾಕಿ, ನೆರೆ ಪರಿಹಾರ ಸೇರಿದಂತೆ ಎಷ್ಟು ನೆರವು ತಂದಿದ್ದೀರಿ?

ನೋಟ್‌ ವ್ಯಾನ್‌ ಹಾಗೂ ಗಬ್ಬರ್‌ ಸಿಂಗ್‌ ಟ್ಯಾಕ್ಸ್‌ಗಳಿಂದಾಗಿ ಶುರುವಾದ ನಿರುದ್ಯೋಗ ಸಮಸ್ಯೆ ಲಾಕ್‌ಡೌನ್‌ ನಂತರ ಉತ್ತುಂಗಕ್ಕೇರಿದೆ. ಮುಖ್ಯಮಂತ್ರಿಯಾಗಿ ಅರ್ಧ ವರ್ಷ ಅಧಿಕಾರ ಪೂರೈಸಿದ ಬಸವರಾಜ ಬೊಮ್ಮಾಯಿ ಅವರೇ ಉದ್ಯೋಗ ಸೃಷ್ಟಿಗೆ ತಾವು ಕೈಗೊಂಡ ಕ್ರಮಗಳೇನು? ರೂಪಿಸಿದ ಯೋಜನೆಗಳೇನು?
ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂದು ಕೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next