Advertisement

ಪ್ರತಿಭಟನಾ ನಿರತ 700 ಡಿಎಂಕೆ ಕಾರ್ಯಕರ್ತರು ಪೊಲೀಸ್‌ ವಶಕ್ಕೆ

11:51 AM Jun 21, 2019 | Team Udayavani |

ಕೊಯಮುತ್ತೂರು: ನೀರಿನ ಸಮಸ್ಯೆಯ ವಿರುದ್ಧ ಇಲ್ಲಿನ ನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ 700 ಕ್ಕೂ ಹೆಚ್ಚು ಡಿಎಂಕೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಕೊಯಮೂತ್ತೂರಿನಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಡಿಎಂಕೆ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಬರದ ಹಿನ್ನಲೆಯಲ್ಲಿ ತಮಿಳುನಾಡಿನಾದ್ಯಂದ ತೀವ್ರ ಜಲಕ್ಷಾಮ ಎದುರಾಗಿದ್ದು ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ.

ವಶಕ್ಕೆ ಪಡೆದ 700 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಕೆಲ ವು ಹೊತ್ತಿನಬಳಿಕ ಬಿಡುಗಡೆಗೊಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next