Advertisement

ಇನ್ಮುಂದೆ ಸರ್ಕಾರಿ ಜಾಹೀರಾತುಗಳಲ್ಲಿ ರಾಜಕಾರಣಿಗಳ ಫೋಟೋಗೆ ಕೊಕ್‌! 

11:49 AM Nov 21, 2018 | Team Udayavani |

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಸರ್ಕಾರಿ ಯೋಜನೆಗಳು ಹಾಗೂ ಕಾಮಗಾರಿಗಳ ಕುರಿತ ಜಾಹೀರಾತುಗಳಲ್ಲಿ ರಾಜಕಾರಣಿಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರ ಭಾವಚಿತ್ರಗಳನ್ನು ಬಳಸಲು ನಿರ್ಬಂಧ ಹೇರಿ ಬಿಬಿಎಂಪಿ ಮಹತ್ವದ ಆದೇಶ ಹೊರಡಿಸಿದೆ. ಸುಪ್ರೀಂಕೋರ್ಟ್‌ ತೀರ್ಪಿನ ಅನ್ವಯ ಪಾಲಿಕೆ ಆಯುಕ್ತ ಮಂಜುನಾಥ್‌ ಪ್ರಸಾದ್‌ ಈ ಕುರಿತು ಮಂಗಳವಾರ ಆದೇಶ ಹೊರಡಿಸಿದ್ದಾರೆ. 

Advertisement

ಕೇಂದ್ರ, ರಾಜ್ಯ ಹಾಗೂ ಪಾಲಿಕೆ ವತಿಯಿಂದ ನಡೆಸಲಾಗುವ ಜಾರಿಯಾಗುವ ಯೋಜನೆಗಳು ಹಾಗೂ ಕಾಮಗಾರಿಗಳನ್ನು ಪ್ರಚುರ ಪಡಿಸುವ ಸಲುವಾಗಿ ಹೊರಡಿಸಲಾಗುವ ಜಾಹೀರಾತುಗಳಲ್ಲಿ ರಾಷ್ಟ್ರಪತಿ, ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳು, ಪ್ರಧಾನ ಮಂತ್ರಿ, ಮುಖ್ಯಮಂತ್ರಿ, ಕೇಂದ್ರ ಹಾಗೂ ರಾಜ್ಯಸರ್ಕಾರದ ಮಂತ್ರಿಗಳು ಹಾಗೂ ರಾಷ್ಟ್ರದ ಮಹಾತ್ಮರ ಭಾವಚಿತ್ರಗಳನ್ನು ಬಳಸಿ ಮುದ್ರಿಸಬೇಕು. ಉಳಿದಂತೆ ಯಾವ ಜನಪ್ರತಿನಿಧಿಗಳ ಭಾವಚಿತ್ರಗಳು ಹಾಗೂ ರಾಜಕೀಯ ಮುಖಂಡರ ಭಾವಚಿತ್ರಗಳನ್ನು ಮುದ್ರಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಜತೆಗೆ, ಈಗಾಗಲೇ ಸಾರ್ವಜನಿಕ ಬಸ್‌ನಿಲ್ದಾಣಗಳು, ಕುಡಿಯುವ ನೀರಿನ ಘಟಕಗಳು ಸೇರಿ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿ ಅಳವಡಿಸಲಾಗಿರುವ ಜಾಹೀರಾತು ಪ್ರಕಟಣೆಗಳಲ್ಲಿ  ಜನಪ್ರತಿನಿಧಿಗಳು ಹಾಗೂ ರಾಜಕೀಯ ಮುಖಂಡರ ಭಾವಚಿತ್ರಗಳಿದ್ದರೆ ಕೂಡಲೇ ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next