Advertisement
ಜಿಲ್ಲೆಯಲ್ಲಿ ಪ್ರತಿನಿತ್ಯ ಸಾಕಷ್ಟು ಮಕ್ಕಳಲ್ಲಿ ಕೋವಿಡ್ ಸೋಂಕು ಲಕ್ಷಣ ಕಂಡು ಬರುತ್ತಿದೆ. ಪ್ರತಿದಿನ ಆಸ್ಪತ್ರೆಗಳಲ್ಲಿ 120ಕ್ಕೂ ಹೆಚ್ಚು ಮಂದಿ ಕೋವಿಡ್‌ತಪಾಸಣೆ ಮಾಡಿಸಲಾಗುತ್ತಿದೆ. ಇದರ ನಡುವೆ ಬರುತ್ತಿರುವ ಹೊರ ರೋಗಿಗಳನ್ನು ತಪಾಸಣೆ ಮಾಡಿಅವರಿಗೆ ಚಿಕಿತ್ಸೆ ನೀಡಲು ವೈದ್ಯರ ಸಿಬ್ಬಂದಿ ಪರದಾಡುವಸ್ಥಿತಿ ನಿರ್ಮಾಣವಾಗಿದೆ. ಕಾಯಿಲೆ ಗಂಭೀರವಾಗಿದ್ದರೆಮಾತ್ರವೇ ಆಸ್ಪತ್ರೆಗಳಿಗೆ ಹೋಗುವಂತೆ ಜಿಲ್ಲಾಧಿಕಾರಿಸೂಚನೆ ನೀಡಿದ್ದರೂ, ಜ್ವರ, ಮೈಕೈ ನೋವು, ನೆಗಡಿ,ಕೆಮ್ಮು ಲಕ್ಷಣಗಳಿರುವವರು ಹೆಚ್ಚಾಗಿ ಬರುತ್ತಿದ್ದಾರೆ. ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ 100 ಜನಶೀತಬಾಧೆಯಿಂದ ಪ್ರತಿನಿತ್ಯ ತೋರಿಸುತ್ತಿದ್ದಾರೆ.
Related Articles
Advertisement
ಆಸ್ಪತ್ರೆಯಲ್ಲಿ ಸ್ಥಳಾವಕಾಶ ಇಲ್ಲದ ಕಾರಣ ಜನಸಂದಣಿ ಹೆಚ್ಚಾಗುತ್ತಿದೆ. ಗರ್ಭಿಣಿಯರು, ಮಕ್ಕಳು, ಸೇರಿದಂತೆ ಸುತ್ತಮುತ್ತಲಿನ ಜನರು ಬರುತ್ತಿದಾರೆ. ಸಾರ್ವಜನಿಕ ಆಸ್ಪತ್ರೆಗಳಲ್ಲಿ ದಿನನಿತ್ಯ 250ಕ್ಕೂ ಅಧಿಕಮಂದಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ದಿನೇ ದಿನೆ ಆಸ್ಪತ್ರೆಗಳತ್ತ ಬರುತ್ತಿರುವ ರೋಗಿಗಳ ಸಂಖ್ಯೆಏರಿಕೆಯಾಗುವ ಸಾಧ್ಯತೆಯಿದೆ.
ಅರಿವು ಮೂಡಿಸುವಲ್ಲಿ ಆರೋಗ್ಯ ಇಲಾಖೆ ವಿಫಲ :
ಸರ್ಕಾರಿ ಶಾಲೆಗಳಲ್ಲಿ ಎಷ್ಟು ಪ್ರಮಾಣದಲ್ಲಿ ಮಕ್ಕಳಿಗೆ ಸೋಂಕು ತಗುಲಿದೆ ಎಂಬುವುದನ್ನು ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಬಹಿರಂಗ ಪಡಿಸಿದ ಕಾರಣ ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಸರ್ಕಾರಿ ಆಸ್ಪತ್ರೆಗಳಿಗೆ ಹೋದರೆ ಕೊರೊನಾ ಪರೀಕ್ಷೆ ಮಾಡುತ್ತಾರೆ ಎಂದು ಹೆದರಿ ಖಾಸಗಿ ಆಸ್ಪತ್ರೆಗಳತ್ತ ಜನ ಮುಖ ಮಾಡುತ್ತಿದ್ದಾರೆ. ಸಾಮಾನ್ಯ ಜ್ವರ ಹಾಗೂ ಕೊರೊನಾ ಲಕ್ಷಣಗಳ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸುವಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿಕೋವಿಡ್ ಪರೀಕ್ಷೆಮಾಡಿಸಲಾಗುತ್ತಿದೆ. ಶೀತದ ವಾತಾವರಣ ಇರುವುದರಿಂದ ನೆಗಡಿ, ಕೆಮ್ಮು, ಜ್ವರ,ಮೈಕೈ ನೋವು ಇರುವ ರೋಗಿಗಳಿಗೆಚಿಕಿತ್ಸೆ ನೀಡಲಾಗುತ್ತಿದೆ. ಸಾರ್ವಜನಿಕರು ಯಾವುದೇ ರೀತಿ ಭಯಪಡುವಅವಶ್ಯಕತೆಯಿಲ್ಲ. ಶೀತಬಾಧೆ ಏನಾದರೂಬಂದ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುವುದು ಉತ್ತಮ. – ಡಾ.ಎ. ತಿಪ್ಪೇಸ್ವಾಮಿ, ಜಿಲ್ಲಾ ಆರೋಗ್ಯಾಧಿಕಾರಿ
ಗ್ರಾಮೀಣ ಭಾಗದ ಪ್ರದೇಶದ ಜನರಿಗೆ ಕೊರೊನಾ ಸೋಂಕಿನಮಾಹಿತಿ ಗೊತ್ತಾಗದೆ ಸೋಂಕಿತರಸಾಮಾನ್ಯ ಜನರ ಜೊತೆ ಓಡಾಡಿ ಮತ್ತಷ್ಟು ಸೋಂಕು ಹರಡಲು ಕಾರಣವಾಗುತ್ತಿದೆ.ಶೀತದ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ ಗ್ರಾಮೀಣ ಜನರಿಗೆ ಆಶಾಕಾರ್ಯಕರ್ತೆಯರು ಹಾಗೂ ಆರೋಗ್ಯಇಲಾಖೆ ಅವರೊಂದಿಗೆ ಅರಿವು ಮೂಡಿಸುವ ಕಾರ್ಯ ಆಗಬೇಕು. – ನಾರಾಯಣಸ್ವಾಮಿ, ನಾಗರಿಕ
– ಎಸ್.ಮಹೇಶ್