Advertisement
ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ಶನಿವಾರ ಆಯೋಜಿಸಲಾಗಿದ್ದ ಶಿಕ್ಷಕರ ದಿನ ಕಾರ್ಯ ಕ್ರಮದಲ್ಲಿ ಇದು ಸ್ಪಷ್ಟವಾಗಿ ಗೋಚರಿಸಿತು. ಶಾಸಕ ಎಚ್.ಕೆ. ಕುಮಾರಸ್ವಾಮಿ ಅವರು ಕಾರ್ಯಕ್ರಮ ಆರಂಭವಾಗುವ ಮೊದಲೇ ತಮ್ಮ ಪತ್ನಿ ಜಿಪಂ ಸದಸ್ಯೆ ಚಂಚಲಾ ಕುಮಾರಸ್ವಾಮಿ ಜೊತೆ ಸ್ಥಳಕ್ಕೆ ಆಗಮಿಸಿ ಮಂತ್ರಿಗಳ ಕೈಕುಲುಕಿ ಚನ್ನರಾಯಪಟ್ಟಣದಲ್ಲಿ ಜೆಡಿಎಸ್ ಕಾರ್ಯಕ್ರಮದ ನೆಪ ಹೇಳಿ ತೆರಳಿದರು.
Related Articles
Advertisement
ಕುಮಾರಸ್ವಾಮಿಗೆ ವಿಶ್ವನಾಥ್ ವಿರೋಧ: ಎರಡನೇ ಅವಧಿಯಲ್ಲಿ ಶಾಸಕ ಎಚ್.ಕೆ.ಕುಮಾರಸ್ವಾಮಿ ಸ್ಪರ್ಧಿಸಿದಾಗ ವಿಶ್ವನಾಥ್ ಹೈಕಮಾಂಡ್ ವಿರುದ್ಧ ಮುನಿಸಿಕೊಂಡು ಜೆಡಿಎಸ್ ತೊರೆದು ಕೆಜೆಪಿ ಸೇರ್ಪಡೆಯಾಗಿದ್ದರು. ನಂತರ ರಾಜ್ಯದಲ್ಲಿ ಬಿಜೆಪಿ ಯೊಂದಿಗೆ ವಿಲೀನವಾದಾಗ ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತ ನಡೆಸಿದ ಸಂದರ್ಭದಲ್ಲಿ ಯೂ ವಿಶ್ವನಾಥ್ ಕ್ಷೇತ್ರದಲ್ಲಿ ಅಷ್ಟಾಗಿ ಪ್ರಾಬಲ್ಯ ಹೊಂದಲು ಮುಂದಾಗಿರಲಿಲ್ಲ. ಕಳೆದ ಬಾರಿ ರಾಜ್ಯದಲ್ಲಿ ಮೈತ್ರಿ ಸರ್ಕಾರವಿದ್ದರೂ ತಾಲೂಕಿನಲ್ಲಿ ಶಾಸಕರ ಮಾತೇ ಬಹುತೇಕ ಅಂತಿಮವಾಗುತ್ತಿತ್ತು.
ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಖುದ್ದಾಗಿ ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್ ಅವರ ಮನೆಗೆ ಬಂದು ಬೆಂಬಲ ಕೋರಿದ್ದರೂ ವಿಶ್ವನಾಥ್ ಪ್ರಜ್ವಲ್ ರೇವಣ್ಣ ಉಮೇದುವಾರಿಕೆಯನ್ನು ವಿರೋಧಿಸಿ ಬಿಜೆಪಿ ಸೇರ್ಪಡೆಯಾಗಿ ಎ.ಮಂಜು ಅವರನ್ನು ಬೆಂಬಲಿಸಿದ್ದರು. ಆದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರವಿದ್ದರಿಂದ ತಾಲೂಕು ರಾಜಕೀಯದಲ್ಲಿ ಅಷ್ಟಾಗಿ ತಲೆ ಕೆಡಿಸಿಕೊಳ್ಳದೇ ರಾಜ್ಯ ಮಟ್ಟದಲ್ಲಿ ಬಿಜೆಪಿ ಮುಖಂಡರ ಸಂಪರ್ಕದಲ್ಲಿದ್ದರು. ಆದರೆ ಇದೀಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿರುವುದರ ಹಿನ್ನೆಲೆ ಯಲ್ಲಿ ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಅಧಿ ಕಾರಿಗಳನ್ನು ಹಿಡಿತದಲ್ಲಿ ಇಟ್ಟಿಕೊಳ್ಳಲು ಯತ್ನಿಸುತ್ತಿ ರುವುದು ಗೋಚರವಾಗುತ್ತಿದೆ.
ಸಚಿವರಿಂದ ಶಾಸಕರ ನಿರ್ಲಕ್ಷ್ಯ- ಆರೋಪ: ಶನಿವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ದಲ್ಲಿ ಶಾಸಕರನ್ನು ಅಧಿಕಾರಿಗಳು ನಿರ್ಲಕ್ಷ್ಯ ಮಾಡಿ ದಾರೆನ್ನಲಾಗಿದೆ. ಜೊತೆಗೆ ಕಾರ್ಯಕ್ರಮಕ್ಕೆ ಸಚಿವ ಮಾಧುಸ್ವಾಮಿ ಬರುವ ಕುರಿತು ಖುದ್ದು ಶಾಸಕರಿಗೆ ಯಾವುದೇ ರೀತಿಯಲ್ಲಿ ಸರಿಯಾದ ಮಾಹಿತಿ ಇಲ್ಲ ಎಂದು ತಿಳಿದು ಬಂದಿದೆ.
ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ತಮ್ಮಣ್ಣಶೆಟ್ಟಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಸಕರಿಗೆ ಮಾಹಿತಿ ನೀಡದೇ ಅಮಾನತುಗೊಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಸಕರು ಚನ್ನರಾಯಪಟ್ಟಣದಲ್ಲಿ ಜೆಡಿಎಸ್ ಕಾರ್ಯ ಕ್ರಮದ ನೆಪ ಹೇಳಿ ಕಾರ್ಯಕ್ರಮಕ್ಕೆ ಕಾಟಾಚಾರದ ಭೇಟಿ ನೀಡಿ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರದಲ್ಲಿದ್ದಾಗಲೇ ತಾಲೂಕಿನ ಅಧಿಕಾರಿಗಳು ಶಾಸಕರ ಮಾತು ಕೇಳುತ್ತಿರಲಿಲ್ಲ. ಈಗ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿರುವುದರಿಂದ ಅಧಿಕಾರಿಗಳ ನಿರ್ಲಕ್ಷ್ಯ ಮಿತಿ ಮೀರಿದೆ ಎನ್ನಲಾಗುತ್ತಿದೆ.
● ಸುಧೀರ್ ಎಸ್.ಎಲ್