Advertisement

ಕಾಂಗ್ರೆಸ್ ಈಗ ಒಡೆದ ಮನೆಯಂತಾಗಿದೆ : ಸಚಿವ ಕೆ.ಎಸ್.ಈಶ್ವರಪ್ಪ

03:23 PM Oct 28, 2019 | Team Udayavani |

ಶಿವಮೊಗ್ಗ : ಕಾಂಗ್ರೆಸ್ ಈಗ ಒಡೆದ ಮನೆಯಂತಾಗಿದೆ. ಡಿಕೆಶಿ ಒಂದು ಕಡೆ, ಸಿದ್ದರಾಮಯ್ಯ ಒಂದು ಕಡೆ ಇದ್ದಾರೆ. ಡಿಕೆಶಿ ಬಿಡುಗಡೆ ನಂತರ ನಡೆಯುತ್ತಿರುವ ಮೆರವಣಿಗೆ ನೋಡಿ ರಾಜ್ಯದ ಜನರಿಗೆ ಅಸಹ್ಯ ಆಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ,ಡಿಕೆಶಿ ಜೈಲಿನಲ್ಲಿದ್ದ ಸಂದರ್ಭದಲ್ಲಿ ಅವರ ತಾಯಿ, ಪತ್ನಿ, ಮಗಳು ನೋಡಿ ನನಗೂ ನೋವು ಆಯ್ತು. ಡಿಕೆಶಿ ಏನಾದ್ರು ಕ್ರೀಡೆಯಲ್ಲಿ ಪದಕ ಗೆದ್ದು ಬಂದ್ರ, ಪಾಕಿಸ್ತಾನದ ವಿರುದ್ಧ ಯುದ್ದ ಗೆದ್ದು ಬಂದ್ರಾ ಮೆರವಣಿಗೆ ಮಾಡೋದಕ್ಕೆ ಜೈಲಿನಲ್ಲಿ ಇದ್ದು ಹೊರಗೆ ಬಂದ ವ್ಯಕ್ತಿಗೆ‌ ಮೆರವಣಿಗೆ, ವಿಜಯೋತ್ಸವ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿಕಾಂಗ್ರೆಸ್ ನವರು ಇದನ್ನು ಉಗ್ರವಾಗಿ ಖಂಡಿಸಬೇಕಿತ್ತು.ರಾಜ್ಯದ ಜನ ಕಾಂಗ್ರೆಸ್ ಅನ್ನು ಈಗಾಗಲೇ ಮೂಲೆಗುಂಪು ಮಾಡಿದ್ದಾರೆ ಎಂದು ಕಾಂಗ್ರೇಸ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಮುಂದುವರೆದು ಮಾತಾನಾಡಿದ ಅವರು ,ಅನರ್ಹ ಶಾಸಕರ ಬಗ್ಗೆ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುವ ಅವಶ್ಯಕತೆ ಇಲ್ಲ. ರೇಣುಕಾಚಾರ್ಯ ಒಂದು ಹೇಳುವುದು, ಸವದಿ ಒಂದು ಹೇಳುವುದು ಸರಿಯಲ್ಲ ಇದನ್ನು ನಮ್ಮ ರಾಜ್ಯಾಧ್ಯಕ್ಷರು ನೋಡಿಕೊಳ್ಳುತ್ತಾರೆ. ಅನರ್ಹ ಶಾಸಕರ ಬಗ್ಗೆ ಚರ್ಚೆ ಅವಶ್ಯಕತೆ ಇಲ್ಲ. ಅನರ್ಹ ಶಾಸಕರು ರಾಜೀನಾಮೆ ಕೊಟ್ಟು ಬರಲಿಲ್ಲ ಅಂದ್ರೆ ನಮ್ಮ ಸರಕಾರನೇ ಇರುತ್ತಿರಲಿಲ್ಲ. ಅನರ್ಹ ಶಾಸಕರು ಅವರು ಏನು ಅಪೇಕ್ಷೆ ಪಡುತ್ತಾರೋ ಅದನ್ನು ಬೆಂಬಲ ಮಾಡೋದು ನಮ್ಮ ಕರ್ತವ್ಯ ಎಂದರು.

ಟಿಪ್ಪು ಜಯಂತಿ ಆಚರಣೆ ಬಗ್ಗೆ ಸಿಎಂ ಇಬ್ರಾಹಿಂ ಪ್ರತಿಕ್ರಿಯೆ ವಿಚಾರದ ಬಗ್ಗೆ ಮಾತಾನಾಡಿದ ಅವರು, ಟಿಪ್ಪು ಜಯಂತಿಯನ್ನು ಕಾಂಗ್ರೆಸ್ ನವರು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಟಿಪ್ಪು ಜಯಂತಿ ರಾಜಕೀಯಕ್ಕೆ ಬಳಸಿಕೊಳ್ಳುವುದನ್ನು ಮೊದಲು ಬಿಡಲಿ ಯಾವ ಮುಸಲ್ಮಾನರು ಟಿಪ್ಪು ಜಯಂತಿ ಮಾಡಿ ಅಂತ ಹೇಳಿರಲಿಲ್ಲ. ಯಾರಿಗೆ ಬೇಕೋ ಅವರು ಅವರವರ ಮನೆಯಲ್ಲಿ ಆಚರಣೆ ಮಾಡಿಕೊಳ್ಳುತ್ತಾರೆ. ಟಿಪ್ಪು ಹೆಸರಿನಲ್ಲಿ ಮುಸಲ್ಮಾನರ ದಿಕ್ಕು ತಪ್ಪಿಸುವ ಕೆಲಸ ಮಾಡಬೇಡಿ ಟಿಪ್ಪು ಹೆಸರನ್ನು ಕಾಂಗ್ರೆಸ್ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next