Advertisement

ಬೆಂಗಳೂರು: ಉತ್ತರ ಒಳನಾಡಿನಲ್ಲಿ ಚಳಿಯ ತೀವ್ರತೆ ಹೆಚ್ಚಳ

11:53 PM Dec 06, 2022 | Team Udayavani |

ಬೆಂಗಳೂರು : ಮಂಗಳವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದೆಲ್ಲೆಡೆ ಒಣಹವೆ ಇತ್ತು. ಉತ್ತರ ಒಳನಾಡಿನ ಹಲವೆಡೆ ಕನಿಷ್ಠ ತಾಪಮಾನ ಗಮನಾರ್ಹವಾಗಿ ಇಳಿಕೆ ಕಂಡಿದ್ದರಿಂದ ಚಳಿಯ ತೀವ್ರತೆ ಕೊಂಚ ಅಧಿಕವಾಗಿತ್ತು.

Advertisement

ಉತ್ತರ ಒಳನಾಡಿನ ಕೆಲವೆಡೆ ಕನಿಷ್ಠ ತಾಪಮಾನ ಗಮನಾರ್ಹವಾಗಿ ಕಡಿಮೆಯಾಗಿದ್ದರೆ ಉತ್ತರ ಒಳನಾಡಿನ ಮತ್ತೆ ಕೆಲವೆಡೆ ಹಾಗೂ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆ ಕೊಂಚ ಇಳಿಕೆಯಾಗಿತ್ತು. ಇದೇ ವೇಳೆ ಉತ್ತರ ಒಳನಾಡಿನ ಒಂದೆರಡು ಕಡೆ ಕನಿಷ್ಠ ತಾಪಮಾನ ಕೊಂಚ ಹೆಚ್ಚಾಗಿತ್ತು. ಉಳಿದಂತೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಎಲ್ಲೆಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಕನಿಷ್ಠ ತಾಪಮಾನದಲ್ಲಿ ಹೆಚ್ಚೇನೂ ಬದಲಾವಣೆ ಕಂಡುಬರಲಿಲ್ಲ.

ಬಾಗಲಕೋಟೆಯಲ್ಲಿ ರಾಜ್ಯದಲ್ಲಿಯೇ ಕನಿಷ್ಠ 10.6 ಡಿ. ಸೆ. ತಾಪಮಾನ ದಾಖಲಾಯಿತು. ಗುರುವಾರ ಬೆಳಗ್ಗೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕೆಲವೆಡೆ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆಯಾಗಿರಲಿದ್ದು ಚಳಿ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next