ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಭಾರಿ ಪ್ರಮಾಣದಲ್ಲಿ ತಾಪಮಾನ ಇಳಿಕೆಯಾಗಿದ್ದು, ಮೈ ಕೊರೆಯುವ ಚಳಿಯಿಂದ ಜನರು ಗಡಗಡ ನಡುಗುವಂತಾಗಿದೆ. ಬುಧವಾರ ಬೆಳಗಾವಿಯಲ್ಲಿ 8.6 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ಇಳಿಕೆಯಾಗಿ ದಾಖಲೆಯಾಗಿದೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ 8.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಹತ್ತು ವರ್ಷಗಳ ನಂತರ ದಾಖಲೆಯ ಪ್ರಮಾಣದಲ್ಲಿ ಚಳಿಗಾಲವಿದ್ದು, ಈ ವರ್ಷ ವಿಪರೀತ ಚಳಿಯಿಂದಾಗಿ ಜನರು ಮನೆ ಬಿಟ್ಟು ಹೊರಗೆ ಬರಲಾರದಂಥ ಪರಿಸ್ಥಿತಿ ನಿರ್ಮಾಣವಾಗಿದೆ.
ಜ. 12ರಂದು ಕನಿಷ್ಠ ತಾಪಮಾನ 8.6 ಡಿಗ್ರಿ ಸೆಲ್ಸಿಯಸ್, ಜ.11ರಂದು 11.9 ಹಾಗೂ ಜ. 10ರಂದು 14.3ರಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ. ನಾಳೆಯಿಂದಲೂ ಅತಿ ಹೆಚ್ಚಿನ ಪ್ರಮಾಣದಲ್ಲಿ ಚಳಿ ಇರುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗಿ ಬೆಳಗಾವಿಗಳನ್ನು ಈ ಬಾರಿಯ ಚಳಿಗಾಲ ಹಣ್ಣುಗಾಯಿ ನೀರುಗಾಯಿ ಮಾಡಿಬಿಟ್ಟಿದೆ. ಚಳಿಯಿಂದ ತಪ್ಪಿಸಿಕೊಳ್ಳಲು ಜನರು ಅಲ್ಲಲ್ಲಿ ಬೆಂಕಿಯಿಂದ ಕಾಯಿಸಿಕೊಳ್ಳುತ್ತಿರುವುದು ಸಾಮಾನ್ಯವಾಗಿದೆ. ಮಾರ್ನಿಂಗ್ ವಾಕ್ ಗೆ ಹೋಗುವವರಂತೂ ತಲೆಗೆ ಟೋಪಿ, ಶಾಲು, ಶ್ವೇಟರ್ ಹಾಕಿಕಿಂಡರೂ ಚಳಿಯಿಂದ ತಪ್ಪಿಸಿಕೊಳ್ಳಲು ಆಗುತ್ತಿಲ್ಲ. ಬುಧವಾರ ಬೆಳಗ್ಗೆ 10 ಗಂಟೆಯಾದರೂ ಚಳಿ ಕಡಿಮೆ ಆಗಿರಲಿಲ್ಲ.
ಇದನ್ನೂ ಓದಿ : ಪಾದಯಾತ್ರೆ ಕರೋನಾ ಯಾತ್ರೆ ಆಗುವುದು ಬೇಡ: ಗೃಹ ಸಚಿವ ಆರಗ ಜ್ಞಾನೇಂದ್ರ