ವಾಷಿಂಗ್ಟನ್: ಅಮೆರಿಕದ ಮಾಜಿ ವಿದೇಶಾಂಗ ಸಚಿವ ಕೊಲಿನ್ ಪೊವೆಲ್(84) ಅವರು ಸೋಮವಾರ ನಿಧನರಾಗಿದ್ದಾರೆ. ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ತಿಳಿಸಿದೆ.
ಪೊವೆಲ್ ಅವರು 1989ರಲ್ಲಿ ಅಮೆರಿಕದ ಸೇನಾ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದರು. ಈ ಮೂಲಕ ಆ ಸ್ಥಾನಕ್ಕೆ ಆಯ್ಕೆಯಾದ ಮೊದಲ ಆಫ್ರಿಕನ್-ಅಮೆರಿಕನ್ ಎನ್ನುವ ಖ್ಯಾತಿ ಪಡೆದಿದ್ದರು. 2001ರಿಂದ 2005ರವರೆಗೆ ಮೊದಲ ಕಪ್ಪುವರ್ಣೀಯ ವಿದೇಶಾಂಗ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.
ಎರಡೂ ಡೋಸ್ ಕೋವಿಡ್ ಲಸಿಕೆ ಪಡೆದಿದ್ದ ಅವರಿಗೆ ಇತ್ತೀಚೆಗೆ ಸೋಂಕು ದೃಢಪಟ್ಟಿತ್ತು ಎಂದು ಕುಟುಂಬ ಹೇಳಿದೆ. ಪೊವೆಲ್ ಅವರ ನಿಧನಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಮಾಜಿ ಅಧ್ಯಕ್ಷ ಜಾರ್ಜ್ ಡಬ್ಲ್ಯೂ ಬುಷ್ ದಂಪತಿ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಗಲ್ಫ್ ಇಸ್ಲಾಮಿಕ್ ಹೂಡಿಕೆಯ ಕಚೇರಿ