Advertisement

ನಿಷ್ಪಕ್ಷಪಾತ ಚುನಾವಣೆಗೆ ಸಹಕರಿಸಿ

05:01 PM Oct 10, 2018 | |

ಬಳ್ಳಾರಿ: ಗಣಿಜಿಲ್ಲೆ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ನ.3 ರಂದು ನಡೆಯಲಿರುವ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ರಾಜಕೀಯ ಪಕ್ಷಗಳು ಸಹಕರಿಸಬೇಕು. ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಚುನಾವಣಾ ವೆಚ್ಚವನ್ನು
70 ಲಕ್ಷ ರೂ.ಗೆ ಮಿತಿಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌
ತಿಳಿಸಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಪಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಮಂಗಳವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಇಂದಿನಿಂದಲೇ (ಮಂಗಳವಾರ) ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಅ.16ರವರೆಗೆ ನಾಮಪತ್ರ ಸಲ್ಲಿಸಬಹುದು. ಅ.17ರಂದು ಪರಿಶೀಲನೆ, ಅ.20ರಂದು ನಾಮಪತ್ರ ಹಿಂಪಡೆಯಬಹುದಾಗಿದೆ. ನ.3ರಂದು ಮತದಾನ ನಡೆಯಲಿದ್ದು, ನ.6ರಂದು ಮತ ಏಣಿಕೆ ನಡೆಯಕಲಿದೆ ಎಂದು ಮಾಹಿತಿ ನೀಡಿದರು.

ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಲಗತ್ತಿಸಬೇಕಾದ ದಾಖಲೆಗಳ ಕುರಿತಂತೆ ಸವಿವರವಾಗಿ ತಮಗೆ ವಿವರಿಸಲಾಗಿದೆ ಮತ್ತು ಜೊತೆಗೆ ದಾಖಲೆಗಳನ್ನು ನೀಡಲಾಗಿದೆ. ಏನಾದರೂ ಸಂದೇಹಗಳಿದ್ದರೆ ನಮ್ಮ ಕಚೇರಿಗೆ ಬಂದು ಪರಿಹರಿಸಿಕೊಳ್ಳಬಹುದು. ಅಭ್ಯರ್ಥಿಗೆ 70 ಲಕ್ಷ ರೂ. ವೆಚ್ಚದ ಮಿತಿಗೊಳಿಸಲಾಗಿದೆ ಎಂದು ತಿಳಿಸಿದರು.

ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗಳನ್ನೇ ಲೋಕಸಭಾ ಉಪಚುನಾವಣೆಗೆ ಬಳಸಿಕೊಳ್ಳಲಾಗುತ್ತಿದ್ದು, ಅವರಿಗೆ ಮೂರು ಹಂತದ ತರಬೇತಿ ನೀಡಲಾಗುವುದು ಎಂದರು. 

ರಾಜಕೀಯ ಪಕ್ಷಗಳ ಸಭೆ, ಸಮಾರಂಭಗಳು, ಪ್ರಚಾರಕ್ಕೆ ಅನುಮತಿ ಕೋರಿ ಸುವಿಧಾ ಎನ್ನುವ ಸಾಫ್ಟ್‌ವೇರ್‌ನಲ್ಲಿ ಆನ್‌ಲೈನ್‌ನಲ್ಲಿಯೇ ಅರ್ಜಿ ಸಲ್ಲಿಸಬಹುದು. ಅದನ್ನು ನಾವು 24 ಗಂಟೆಗಳಲ್ಲಿ ಇತ್ಯರ್ಥಪಡಿಸಿ ಅನುಮತಿ ನೀಡುತ್ತೇವೆ. ಚುನಾವಣೆಯನ್ನು ಅಚ್ಚುಕಟ್ಟಾಗಿ ಮತ್ತು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಈ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುವ 8 ವಿಧಾನಸಭಾ ಕ್ಷೇತ್ರಗಳಲ್ಲಿ ಎಆರ್‌ಒ ನೇಮಕ ಮಾಡಲಾಗಿದೆ. ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಗ್ರಾಮಮಟ್ಟದಿಂದ ಜಿಲ್ಲಾಮಟ್ಟದವರೆಗೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

Advertisement

ಅಭ್ಯರ್ಥಿಗಳು ಚುನಾವಣಾ ಸಂದರ್ಭದಲ್ಲಿ ಬಳಸುವ ವಸ್ತುಗಳಿಗೆ ರೇಟ್‌(ದರ) ಫಿಕ್ಸ್ ಮಾಡಿ ಅಧಿಸೂಚನೆ ಹೊರಡಿಸಲಾಗಿದ್ದು, ಏನಾದರೂ ಆಕ್ಷೇಪಣೆಗಳಿದ್ದರೆ ಅ.11ರೊಳಗೆ ಸಲ್ಲಿಸಬಹುದು ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಚುನಾವಣಾ
ತಹಶೀಲ್ದಾರ್‌ ಹಲೀಮಾ, ವೆಚ್ಚಕ್ಕೆ ಸಂಬಂಧಿಸಿದ ನೋಡಲ್‌ ಅಧಿಕಾರಿ ಚನ್ನಪ್ಪ, ಎಂಸಿಎಂಸಿ ನೋಡಲ್‌ ಅಧಿಕಾರಿ ಬಿ.ಕೆ.ರಾಮಲಿಂಗಪ್ಪ ಇನ್ನಿತರರಿದ್ದರು.

ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ಕೈಗೊಂಡಿದ್ದು, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗಳನ್ನೇ ಲೋಕಸಭಾ ಉಪಚುನಾವಣೆಗೆ ಬಳಸಿಕೊಳ್ಳುತ್ತಿದ್ದು, ಅವರಿಗೆ ಮೂರು ಹಂತದ ತರಬೇತಿ ನೀಡಲಾಗುವುದು.
ಡಾ| ರಾಮ್‌ ಪ್ರಸಾತ್‌ ಮನೋಹರ್‌, ಚುನಾವಣಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next