Advertisement

ರಾಜ್ಯವನ್ನು ನಂ.1 ಮಾಡಲು ಸಹಕರಿಸಿ: ಯಡಿಯೂರಪ್ಪ

12:10 PM Aug 07, 2019 | Suhan S |

ಬೆಂಗಳೂರು: ‘ದೇಶದಲ್ಲಿ ಕರ್ನಾಟಕವನ್ನು ನಂ.1 ರಾಜ್ಯವನ್ನಾಗಿ ಮಾಡಲು ಕೇಂದ್ರದಿಂದ ಹೆಚ್ಚು ಅನುದಾನ, ನೆರವು ಪಡೆಯುವ ನಿಟ್ಟಿನಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು, ಸಂಸದರು ಶ್ರಮಿಸಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

Advertisement

ದೆಹಲಿಯಲ್ಲಿ ಮಂಗಳವಾರ ರಾಜ್ಯದ ಕೇಂದ್ರ ಸಚಿವರು, ಸಂಸದರ ಸಭೆಯಲ್ಲಿ ಮಾತನಾಡಿ, ‘ಕೇಂದ್ರ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ನೆರವು ಪಡೆಯುವಲ್ಲಿ ಎಲ್ಲ ಸಂಸದರ ಸಹಕಾರದ ನಿರೀಕ್ಷೆಯಲ್ಲಿದ್ದೇನೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಣ ಬಾಂಧವ್ಯ ಮಹತ್ವದ್ದು. ರಾಜ್ಯದ ನೆಲ, ಜಲ, ಭಾಷೆಯ ವಿಷಯದಲ್ಲಿ ರಾಜ್ಯದ ಸಂಸದರೆಲ್ಲಾ ಸಂಸತ್ತಿನಲ್ಲಿ ಒಗ್ಗಟ್ಟಾಗಿ ಕಾರ್ಯ ನಿರ್ವಹಿಸಬೇಕಾದ ಅಗತ್ಯವಿದೆ’ ಎಂದು ತಿಳಿಸಿದರು.

ರಾಜ್ಯದ ನಾನಾ ಅಭಿವೃದ್ಧಿ ವಿಚಾರ, ಕೇಂದ್ರ ಸರ್ಕಾರದಲ್ಲಿ ಬಾಕಿ ಇರುವ ಹಲವು ಪ್ರಸ್ತಾವನೆಗಳಿಗೆ ಸಂಬಂಧಪಟ್ಟಂತೆ ಪ್ರಧಾನಿ ಸೇರಿದಂತೆ ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ಹಲವು ದಿನಗಳಿಂದ ಬಾಕಿ ಇರುವ ಕನಿಷ್ಠ ಬೆಂಬಲ ಬೆಲೆಯ ಕೇಂದ್ರ ಪಾಲಿನ ಅನುದಾನ, ಕಲ್ಲಿದ್ದಲು ಗಣಿ ಹಂಚಿಕೆ, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಬಾಕಿ ಅನುದಾನ ಇತರೆ ವಿಚಾರಗಳ ಬಗ್ಗೆಯೂ ಕೇಂದ್ರ ಸಚಿವರ ಗಮನ ಸೆಳೆಯಲಾಗಿದೆ ಎಂದು ಸಭೆಯಲ್ಲಿ ಹೇಳಿದರು.

ರಾಜ್ಯದ ಬಹಳಷ್ಟು ಕಡೆ ಬರದ ಛಾಯೆ ಆವರಿಸಿದ್ದರೆ, ಉತ್ತರ ಕರ್ನಾಟಕದಲ್ಲಿ ಕೃಷ್ಣಾ ನದಿಯಲ್ಲಿ ಪ್ರವಾಹ ಉಂಟಾಗಿ ಐದು ಜಿಲ್ಲೆಗಳಲ್ಲಿ ಜನ ತೊಂದರೆಗೀಡಾಗಿದ್ದಾರೆ. ರಾಜ್ಯವು ವಿಪತ್ತು ನಿರ್ವಹಣೆಗೆ ಸನ್ನದ್ಧವಾಗಿದೆ. ಸಂಕಷ್ಟಕ್ಕೆ ಒಳಗಾದವರಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ಪಡೆಯುವಲ್ಲಿ ಕೇಂದ್ರ ಸಚಿವರು, ಸಂಸದರ ಸಹಕಾರ ಮುಖ್ಯ ಎಂದು ತಿಳಿಸಿದರು.

Advertisement

ಸಭೆಯಲ್ಲಿ ಸಂವಾದ: ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರಕ್ಕಾಗಿ ಸಬ್‌ಅರ್ಬನ್‌ ರೈಲ್ವೆ ಯೋಜನೆ ಜಾರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದರು. ಆಗ ಯಡಿಯೂರಪ್ಪ, ಇದು ಕೇಂದ್ರದ ಮಾಜಿ ಸಚಿವ ಅನಂತ ಕುಮಾರ್‌ ಅವರ ಕನಸು. ಆ ನಿಟ್ಟಿನಲ್ಲಿ ಯೋಜನೆ ಕಾರ್ಯಗತಗೊಳಿಸಲು ಮುಂದಾಗಿದ್ದೇನೆ ಎಂದು ರಾಜ್ಯಸಭಾ ಸದಸ್ಯ ರಾಜೀವ್‌ಗೌಡ ಹೇಳಿದರು. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಸಂಸತ್‌ ಅಧಿವೇಶನ ಮುಗಿಯುತ್ತಿದ್ದಂತೆ ರೈಲ್ವೆ ಸಚಿವರು ಬೆಂಗಳೂರಿಗೆ ಬಂದು ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಒಪ್ಪಿಗೆ ನೀಡಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next