Advertisement
ಪೊಲೀಸರ ಪ್ರಕಾರ, ಮೃತರಲ್ಲಿ ಐವರನ್ನು ಹರ್ಮನ್ (26), ತ್ರಿಪಾಲ್ (35), ಮೊಹಮ್ಮದ್ ಸಾಹಿಲ್ (19), ಸತ್ಯರಾಜು (25) ಮತ್ತು ಶಂಕರ್ ಎಂದು ಗುರುತಿಸಲಾಗಿದೆ. ಒಟ್ಟು 13 ಮಂದಿಯಲ್ಲಿ ಆರು ಮಂದಿ ಬೆಂಗಳೂರು ಉತ್ತರ ಮತ್ತು ಹೊಸ್ಮಾಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರು ಆರೋಪಿಗಳ ಬಂಧಿಸಿದ್ದಾರೆ. ಬಂಧಿತರ ಪೈಕಿ ಕಟ್ಟಡದ ಮಾಲೀಕ ಮತ್ತು ಕಟ್ಟಡ ನಿರ್ಮಾಣದ ಉಸ್ತುವಾರಿ ಕಂಟ್ರಾಕ್ಟರ್ ಸೇರಿದ್ದಾರೆ ಎನ್ನಲಾಗಿದೆ. ಬಿಎನ್‌ಎಸ್, ಬಿಬಿಎಂಪಿ ಆರ್‌ಇಆರ್‌ಎ ನಿಯಮದಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಾರ್ಮಿಕ ಮೊಹಮ್ಮದ್ ಹರ್ಷದ್ ನೀಡಿರೋ ದೂರಿನ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
Related Articles
Advertisement
ಬಂಧಿತರನ್ನು ಕಟ್ಟಡದ ಮಾಲೀಕ ಭುವನ್ ರೆಡ್ಡಿ ಹಾಗೂ ಕಾಂಟ್ರಾಕ್ಟರ್ ಮುನಿಯಪ್ಪ ಎಂದು ಗುರುತಿಸಲಾಗಿದೆ. ಈ ನಿರ್ಮಾಣ ಹಂತದ ಕಟ್ಟಡ ಭುವನ್ ರೆಡ್ಡಿ ಹೆಸರಿನಲ್ಲಿದ್ದು, ಈತ ಪ್ರಕರಣದ ಮೊದಲನೇ ಆರೋಪಿ ಮುನಿರಾಜ ರೆಡ್ಡಿಯ ಮಗ ಎನ್ನಲಾಗಿದೆ. ಆರೋಪಿಗಳ ವಿರುದ್ಧ ಬಿಎನ್‌ಎಸ್ (BNS), ಬಿಬಿಎಂಪಿ ಆರ್‌ಇಆರ್‌ಎ ಆ್ಯಕ್ಟ್ ಹಾಗೂ ರೇರಾ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ. ಬಿಎನ್ ಎಸ್ 105, 125(ಅ) 125(ಆ), 270,3(5) ಬಿಬಿಎಂಪಿ ಆ್ಯಕ್ಟ್ 326, 327,328 ಅಡಿಯಲ್ಲಿ ಇಬ್ಬರೂ ಆರೋಪಿಗಳ ಬಂಧಿಸಿದ್ದಾರೆ.
ಮಾಲೀಕರ ವಿರುದ್ಧ ಕಠಿನ ಕ್ರಮ:ಕಟ್ಟಡ ದುರಂತಕ್ಕೆ ಸಂಬಂಧಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ ಈ ಕ್ಷಣದ ಮಾಹಿತಿ ಪ್ರಕಾರ ಕಟ್ಟಡದ ಕುಸಿತದಲ್ಲಿ ಒಟ್ಟು 21 ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದ್ದು, ಕಟ್ಟಡದ ಕುಸಿತದ ದಿನ 26 ಮಂದಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದರು. ಕಟ್ಟಡದ ಮಾಲೀಕರ ಹಾಗೂ ಇತರರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದರು. 4 ಅಂತಸ್ತಿಗೆ ಮಾತ್ರ ಪರವಾನಗಿ
ಇನ್ನು ಈ ಕಟ್ಟಡಕ್ಕೆ 4 ಅಂತಸ್ತಿಗೆ ಮಾತ್ರ ಅಧಿಕಾರಿಗಳು ಪರವಾನಗಿ ನೀಡಿದ್ದರು. ಆದರೆ ಗುತ್ತಿಗೆದಾರ ಮುನಿಯಪ್ಪ ಏಳು ಮಹಡಿಗಳನ್ನು ನಿರ್ಮಾಣ ಮಾಡಿದ್ದ ಎಂದು ಅಧಿಕಾರಿ ತಿಳಿಸಿದರು.