ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Advertisement
ಜಿಲ್ಲೆಯ ಎಲ್ಲ ಅಧಿಕಾರಿಗಳು ಕಚೇರಿ ಗಳಿಂದಾಚೆಗೆ ತೆರಳಿ ಸಮಸ್ಯೆಗಳನ್ನು ಅರಿಯಬೇಕು ಮತ್ತು ಕಾಮಗಾರಿಗಳನ್ನು ಪರಿಶೀಲಿಸಬೇಕು. ಅಧೀನ ಕಚೇರಿಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿಯನ್ನು ಪರಿಶೀಲಿಸಬೇಕು. ಎಲ್ಲ ಅಧಿಕಾರಿ ಮತ್ತು ಸಿಬಂದಿ ಕಚೇರಿಗೆ ಸಮಯಕ್ಕೆ ಸರಿಯಗಿ ಆಗಮಿಸಿ, ಕೆಲಸ ಕಾರ್ಯಗಳನ್ನು ಮುಗಿಸುವಂತೆ ಮತ್ತು ಕರ್ತವ್ಯದ ಅವಧಿಯಲ್ಲಿ ವೃಥಾ ಕಾಲಹರಣ ಮಾಡದೆ ನಿಗದಿತ ಸಮಯದಲ್ಲಿ ಗುಣಮಟ್ಟದ ಕೆಲಸ ನಿರ್ವಹಿಸುವುದಕ್ಕೆ ಆದ್ಯತೆ ನೀಡಬೇಕು. ಈ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲಾ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತಾನು ಪರಿಶೀಲಿಸುವುದಾಗಿ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಕಚೇರಿಗೆ ಆಗಮಿಸುವ ಸಾರ್ವಜನಿಕರನ್ನು ಸೂಕ್ತ ರೀತಿಯಲ್ಲಿ ಗೌರವಿಸಿ ಅವರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು. ಅನವಶ್ಯಕವಾಗಿ ವಿವಿಧ ಕಚೇರಿಗಳಿಗೆ ಅಲೆದಾಡಿಸಬೇಡಿ. ನಿಮ್ಮ ಕಚೇರಿಯಲ್ಲಿ ಸಾರ್ವಜನಿಕರು ಕೋರುವ ಸೇವೆ ಇಲ್ಲವಾದಲ್ಲಿ ಸಂಬಂಧಪಟ್ಟ ಇಲಾಖೆಗೆ ತೆರಳಿ ಸೌಲಭ್ಯ ಪಡೆಯುವ ಬಗ್ಗೆ ಮಾಹಿತಿ ನೀಡಿ. ದೂರುಗಳು ಬಾರದಂತೆ ಕರ್ತವ್ಯ ನಿರ್ವಹಿಸಿ ಎಂದು ಜಗದೀಶ್ ಹೇಳಿದರು. ಮೊಬೈಲ್ ಸ್ವಿಚ್ ಆಫ್ ಕೂಡದು
ಎಲ್ಲ ಅಧಿಕಾರಿಗಳು ತಮ್ಮ ಮೊಬೈಲ್ ಸ್ವಿಚ್ ಆಫ್ ಆಗದಂತೆ ಎಚ್ಚರಿಕೆ ವಹಿಸಬೇಕು. ಕರೆ ಮಾಡಿದಾಗ ಸಿಗುವಂತಿರಬೇಕು. ಕೇಂದ್ರ ಸ್ಥಾನದಲ್ಲಿ ಲಭ್ಯರಿದ್ದು ಹೊರಹೋಗುವಾಗ ಅನುಮತಿ ಪಡೆಯಬೇಕು. ಪ್ರಸ್ತಾವನೆಗಳನ್ನು ಸಲ್ಲಿಸುವಾಗ ಸ್ಪಷ್ಟ ಅಭಿಪ್ರಾಯಗಳೊಂದಿಗೆ ಪೂರ್ಣ ದಾಖಲೆಗಳ ಸಹಿತ ಸಲ್ಲಿಸಿ. ಕಡತಗಳ ಶೀಘ್ರ ವಿಲೇವಾರಿಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
Related Articles
ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement