Advertisement

ಕುಸಿದ ಕಾಲುವೆ ಪರಿಶೀಲನೆ

02:23 PM Mar 15, 2022 | Team Udayavani |

ಕೆಂಭಾವಿ: ಹುಣಸಗಿ ತಾಲೂಕಿನ ಅಗ್ನಿ ಗ್ರಾಮದ ಬಳಿ ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆ ಕುಸಿದ ಪ್ರದೇಶಕ್ಕೆ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಭೇಟಿ ನೀಡಿ ಪರಿಶೀಲಿಸಿದರು.

Advertisement

ನಂತರ ಮಾತನಾಡಿದ ಅವರು, ಕಾಲುವೆ ಪ್ರತಿವರ್ಷ ಇದೇ ಸ್ಥಳದಲ್ಲಿ ಕುಸಿಯುತ್ತಿದ್ದು ಇದರಿಂದ ರೈತರಿಗೆ ತೀರ್ವ ತೊಂದರೆಯಾಗುತ್ತಿದೆ. 4 ಜಿಲ್ಲೆಗಳ ರೈತರಿಗೆ ನೀರೊದಗಿಸುವ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿ, ಶಾಶ್ವತ ದುರಸ್ತಿಗೆ ಪರಿಹಾರ ಕಂಡುಕೊಳ್ಳಬೇಕು. ಇಲ್ಲದಿದ್ದರೆ ಪ್ರತಿ ಬಾರಿಯೂ ರೈತರು ಬೆಳೆದ ಎರಡನೇ ಬೆಳೆ ಹಾನಿಯಾಗುತ್ತದೆ. ಬೇಸಿಗೆ ಸಂದರ್ಭದಲ್ಲಿ ಬೆಳೆಗಳಿಗೆ ನೀರಿನ ಅವಶ್ಯಕತೆ ಹೆಚ್ಚಾಗಿದ್ದು, ಈ ಬಗ್ಗೆ ಅಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಹೇಳಿದರು.

ಶೀಘ್ರದಲ್ಲಿ ಕಾಮಗಾರಿ ಮುಗಿಸಿ ಕಾಲುವೆಗೆ ನೀರು ಹರಿಸಲು ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಮರಿಗೌಡ ಹುಲಕಲ್‌, ಜಿಪಂ ಮಾಜಿ ಅಧ್ಯಕ್ಷ ಸಿದ್ದನಗೌಡ ಪೊಲೀಸಪಾಟೀಲ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಸನಗೌಡ ಚಿಂಚೊಳಿ, ಬಾಪುಗೌಡ ಪಾಟೀಲ ಹುಣಸಗಿ, ಸಾಹೇಬಲಾಲ್‌ ಆಂದೇಲಿ, ಮಹಿಪಾಲರಡ್ಡಿ ಡಿಗ್ಗಾವಿ, ರಂಗಪ್ಪ ವಡ್ಡರ, ಶಿವರಾಜ ಬುದೂರ ಹಾಗೂ ಇಲಾಖೆ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next