Advertisement
ವಿಶ್ವಾಸಮತ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ನಮ್ಮ ಕುಟುಂಬದ ಸದಸ್ಯರೇ ಆಗಿದ್ದ ಅವರು ನಮ್ಮನ್ನು ಬಿಟ್ಟು ಹೋಗಿದ್ದಾರೆ. ಎಲ್ಲೋ ಒಂದು ಕಡೆ ಅವರ ರಾಜಕೀಯ ಭವಿಷ್ಯವೇ ಮುಸುಕಾಗುತ್ತದೆ. ಬಿಜೆಪಿಯವರು ಅವರನ್ನು ದಾರಿ ತಪ್ಪಿಸುತ್ತಿದ್ದಾರೆ. ಅವರೆಂದೂ ಸಚಿವರಾಗಲು ಸಾಧ್ಯವೇ ಇಲ್ಲ. ಅನ್ಯಾಯವಾಗಿ ಹೋಗ್ತಾರಲ್ಲಾ , ಹೂವು ತೆಗೆದುಕೊಂಡು ಹೋಗಬೇಕಲ್ಲಾ ಎಂಬ ನೋವು ನನ್ನನ್ನು ಕಾಡುತ್ತಿದೆ’ ಎಂದು ತಿಳಿಸಿದರು.
Related Articles
Advertisement
ಇದಕ್ಕೆ ಖಾರವಾಗಿ ಉತ್ತರ ನೀಡಿದ ಶಿವಕುಮಾರ್, ವಿಪ್‌ಗೆ ಬೆಲೆ ಇಲ್ಲ ಎನ್ನುವುದಾದರೆ ನೀವು ಯಾವ ಆಧಾರದ ಮೇಲೆ ನಿಮ್ಮ ಪಕ್ಷದ ಶಾಸಕರಿಗೆ ವಿಪ್ ಜಾರಿ ಮಾಡಿದ್ದೀರಿ. ಹಿರಿಯ ರಾಜಕಾರಣಿಯಾಗಿ ನೀವು ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸೇರಿದಂತೆ ಎಲ್ಲಾ ಸ್ಥಾನಗಳಲ್ಲಿ ಕೆಲಸ ಮಾಡಿದ್ದೀರಿ. ಈ ರೀತಿ ಮಾತನಾಡುವುದು ಸರಿಯೇ ಎಂದು ಪ್ರಶ್ನಿಸಿದರು.
ಮಾನನಷ್ಟ ಮೊಕದ್ದಮೆ: ಬಿಜೆಪಿ ಸರ್ಕಾರ ತರಲು ಡಿ.ಕೆ.ಶಿವಕುಮಾರ್ ನೆರವು ಎಂಬ ಅರ್ಥದಲ್ಲಿ ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದರು. ನನ್ನ ಪರ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ಹಂತದಲ್ಲಿ ಆ ಹೇಳಿಕೆ ನೀಡಿ ನನ್ನ ಮನಸ್ಸಿಗೆ ನೋವಾಗುವಂತೆ ಮಾಡಿದರು. ಅವರ ವಿರುದ್ಧ 2.04 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ದೂರು ದಾಖಲಿಸುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. “ನಾನು ರಾಜಕೀಯವಾಗಿ ಈ ಸ್ಥಾನಕ್ಕೆ ಬರಲು ಎಸ್.ಎಂ.ಕೃಷ್ಣ, ಬಂಗಾರಪ್ಪ ಮತ್ತು ಗಾಂಧಿ ಕುಟುಂಬ ಕಾರಣ. ನನಗೆ ಧರಂಸಿಂಗ್ ಹಾಗೂ ಸಿದ್ದರಾಮಯ್ಯ ಅವರು ಕೆಲವು ದಿನ ಸಂಪುಟದಲ್ಲಿ ಅವಕಾಶ ಕೊಟ್ಟಿರಲಿಲ್ಲ’ ಎಂದು ಹೇಳಿದರು.
ಸ್ಪರ್ಧೆ ಮಾಡಿದ್ದಕ್ಕೆ ಸಾಲಗಾರನಾದೆ: ಡಿ.ಕೆ.ಶಿವಕುಮಾರ್ ಮಾತನಾಡುವಾಗ ಮಧ್ಯೆ ಪ್ರವೇಶಿಸಿದ ಸಚಿವ ಕೃಷ್ಣ ಬೈರೇಗೌಡ, “ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲು ಮಾನಸಿಕವಾಗಿ ತಯಾರಿರಲಿಲ್ಲ. ನನ್ನ ಕುಟುಂಬದವರ ಒಪ್ಪಿಗೆಯೂ ಇರಲಿಲ್ಲ. ಆದರೆ, ಎಸ್.ಟಿ.ಸೋಮಶೇಖರ್, ಗೋಪಾಲಯ್ಯ, ಬೈರತಿ ಬಸವರಾಜ್ ಅವರೇ ಒತ್ತಡ ತಂದು ನಿಲ್ಲಿಸಿದ್ದರು. ಸೋದರ ಸಮಾನರಾದ ಅವರ ಮಾತು ನಂಬಿ ಸ್ಪರ್ಧೆ ಮಾಡಿದೆ. ಆದರೆ, ಅವರ ಕ್ಷೇತ್ರಗಳಲ್ಲಿ ನನಗೆ ಲೀಡ್ ಬರಲಿಲ್ಲ. ಚುನಾವಣೆಯಲ್ಲಿ ಏನೆಲ್ಲಾ ಮಾಡಿದರು ಬೇರೆ ಮಾತು. ಆದರೆ, ಚುನಾವಣೆಗೆ ಸ್ಪರ್ಧೆ ಮಾಡಿದ್ದಕ್ಕೆ ನಾನು ಸಾಲಗಾರನಾದೆ’ ಎಂದು ಹೇಳಿದರು.
“ಜೈಲು ಮಂತ್ರಿಯಾಗಿದ್ದ ನಾನು ಜೈಲಿಗೆ ಹೋಗಲು ಸಿದ್ಧ. ಜೈಲಿಗೆ ಹೋಗಿ ಬಂದವರೆಲ್ಲಾ ಏನೇನು ಆಗಿದ್ದಾರೆ ಎಂಬುದು ಗೊತ್ತಿದೆ. ನಾನು ಅದಕ್ಕೆಲ್ಲಾ ಹೆದರಲ್ಲ. ಬಿಜೆಪಿ ಸರ್ಕಲ್‌ನಲ್ಲಿ ನನ್ನನ್ನು ಜೈಲಿಗೆ ಕಳುಹಿಸುವ ಮಾತು ಕೇಳಿ ಬರುತ್ತಿದೆ. ನಾನು ಶಾಸಕರನ್ನು ಲಾಕ್ ಮಾಡಬಹುದು ಎಂದು ಮನಸ್ಸು ಮಾಡಿದ್ದರೆ ಸ್ಪೀಕರ್‌ಗೆ ರಾಜೀನಾಮೆ ನೀಡಿದ ನಂತರ ನನ್ನ ಮನೆಗೆ ಕರೆದೊಯ್ದ ಐವರು ಶಾಸಕರನ್ನು ಲಾಕ್ ಮಾಡಬಹುದಿತ್ತು. ಎಂ.ಟಿ.ಬಿ.ನಾಗರಾಜ್ ಅವರನ್ನು ಸಹ ಲಾಕ್ ಮಾಡಬಹುದಿತ್ತು. ಆದರೆ, ಅಂತಹ ಕೆಲಸವನ್ನು ನಾನು ಮಾಡಲಿಲ್ಲ. -ಡಿ.ಕೆ.ಶಿವಕುಮಾರ್