Advertisement

ಕ್ಷಿಪ್ರಗತಿಯಲ್ಲಿ ತೆರಿಗೆ ಸಂಗ್ರಹ ಮಾಡಿ

04:11 PM Dec 22, 2019 | Team Udayavani |

ಕೋಲಾರ: ಜಿಲ್ಲೆಯಲ್ಲಿರುವ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ ನಿರ್ಮಾಣ ಕೂಡಲೇ ಪ್ರಾರಂಭಗೊಳ್ಳಬೇಕು. ಗ್ರಾಪಂಗಳು ಶೇ.100 ತೆರಿಗೆ ಸಂಗ್ರಹವಾಗಬೇಕು. ಇದನ್ನು ಎಲ್ಲಾ ಇಒಗಳು ಖಾತ್ರಿಪಡಿಸಿಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾ ಯತ್‌ ರಾಜ್‌ ಇಲಾಖೆ ಪ್ರಧಾನ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್‌ ಸೂಚಿಸಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಇಲಾಖೆಗಳ ಕಾರ್ಯ ಕ್ರಮಗಳ ಅನುಷ್ಠಾನದ ಪ್ರಗತಿ ಪರಿ ಶೀಲನಾ ಸಭೆ ನಡೆಸಿದ ಸೂಚನೆ ನೀಡಿದ ಅವರು, ಜಿಲ್ಲೆಯಲ್ಲಿ ಕುಡಿ ಯುವ ನೀರಿನ ಶುದ್ಧೀಕರಣ ಘಟಕಗಳು ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಪಿಡಿಒಗಳು ಕಾಲಕಾಲಕ್ಕೆ ಮಾಹಿತಿ ನೀಡಿ, ಸಮಸ್ಯೆ ಇರುವ ಕಡೆ ಮೊದಲ ಆದ್ಯತೆ ನೀಡಿ, ದುರಸ್ತಿ ಕಾರ್ಯ ಕೈಗೊಳ್ಳಬೇಕು. ಅದರ ಮೇಲುಸ್ತುವಾರಿ ಇಒಗಳು ವಹಿಸಬೇಕು ಎಂದು ಸಲಹೆ ನೀಡಿದರು.

ಸ್ಥಳೀಯವಾಗಿ ಚುರುಕಾಗಿರುವ ಸ್ವಸಹಾಯ ಸಂಘಗಳ ಸದಸ್ಯರನ್ನು ಗುರುತಿಸಿ ಅವರಿಗೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್‌ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಕುರಿತು ತರಬೇತಿ ಒದಗಿಸಿ, ಅವರನ್ನೇ ಬಳಸಿಕೊಳ್ಳುವಂತೆ ಕ್ರಮ ವಹಿಸಲು ಸೂಚಿಸಿದರು.

77 ಗ್ರಾಮಗಳಲ್ಲಿ ನೀರಿನ ಸಮಸ್ಯೆ: ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಮಾತನಾಡಿ, ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ 77 ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ 28 ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಇವುಗಳಲ್ಲಿ 65 ಗ್ರಾಮಗಳಿಗೆ ಖಾಸಗಿ ಕೊಳವೆಬಾವಿಗಳ ಮೂಲಕ ಉಳಿದವುಗಳಿಗೆ ಖಾಸಗಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಎಲ್ಲಾ ಇಲಾಖೆಗಳು ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನವನ್ನು ಶೇ.100 ಖರ್ಚು ಮಾಡಬೇಕು. ತಪ್ಪಿದ್ದಲ್ಲಿ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ 1099 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, 1042 ಕಾರ್ಯನಿರ್ವಹಿಸುತ್ತಿವೆ. ಇವುಗಳು ಕೆಟ್ಟರೆ ದುರಸ್ತಿ ಮಾಡಲು ಸ್ಥಳೀಯ ವ್ಯಕ್ತಿಗಳಿಗೆ ತರಬೇತಿ ನೀಡಲಾಗುವುದು ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪುಷ್ಪಲತಾ, ಉಪವಿಭಾಗಾಧಿಕಾರಿ ಸೋಮ ಶೇಖರ್‌ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next