Advertisement
ಎ.1ರಿಂದ ಆಸ್ತಿ ತೆರಿಗೆ ಸಂಗ್ರಹ ಆರಂಭಿಸಿದರೆ 2023-24ರ ಹಣಕಾಸು ವರ್ಷದಲ್ಲಿ ಸುಮಾರು 150 ಕೋಟಿ ರೂ. ಸಂಗ್ರಹಿಸುವ ನಿರೀಕ್ಷೆ ಜಮ್ಮು ಮತ್ತು ಕಾಶ್ಮೀರ ಆಡಳಿತದ್ದು. ಮಹಾನಗರಿ ಪಾಲಿಕೆಗಳು ಮತ್ತು ಇತರ ಸ್ಥಳೀಯ ಸಂಸ್ಥೆಗಳು ಆರ್ಥಿಕವಾಗಿ ಸ್ವಾವಲಂಬನೆ ಹೊಂದುವಂತೆ ಮಾಡುವುದೇ ಇದರ ಉದ್ದೇಶ ಎಂದು ಗೃಹ ಮತ್ತು ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಚ್.ರಾಜೇಶ್ ಪ್ರಸಾದ್ ಹೇಳಿದ್ದಾರೆ.
ಕೇಂದ್ರಾಡಳಿತ ಪ್ರದೇಶದಲ್ಲಿ ಆಸ್ತಿತೆರಿಗೆ ಹೇರುವ ನಿರ್ಧಾರ ಖಂಡಿಸಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಬಾರ್ ಅಸೋಸಿಯೇಶನ್‌ನ ವಕೀಲರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ. ಆಡಳಿತದ ತಪ್ಪು ನಿರ್ಧಾರಗಳಿಂದಾಗಿ ಈಗಾಗಲೇ ಜನರು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದಿದ್ದಾರೆ.