Advertisement

ಎ.1ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಆಸ್ತಿ ತೆರಿಗೆ ಸಂಗ್ರಹ; ವ್ಯಾಪಕ ಆಕ್ರೋಶ

11:30 PM Feb 23, 2023 | Team Udayavani |

ಜಮ್ಮು: ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಆಸ್ತಿ ತೆರಿಗೆ ಸಂಗ್ರಹಿಸು­ವಂಥ ಹೊಸ ಆಸ್ತಿ ನೀತಿ ಜಾರಿಗೆ ಬಂದಿದ್ದು, ಎ.1ರಿಂದಲೇ ತೆರಿಗೆ ಸಂಗ್ರಹಕ್ಕೆ ಜಮ್ಮು-ಕಾಶ್ಮೀರ ಆಡಳಿತ ಮುಂದಾಗಿದೆ. ಆದರೆ ಈ ನಿರ್ಧಾರಕ್ಕೆ ಸ್ಥಳೀಯರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Advertisement

ಎ.1ರಿಂದ ಆಸ್ತಿ ತೆರಿಗೆ ಸಂಗ್ರಹ ಆರಂಭಿಸಿದರೆ 2023-24ರ ಹಣಕಾಸು ವರ್ಷದಲ್ಲಿ ಸುಮಾರು 150 ಕೋಟಿ ರೂ. ಸಂಗ್ರಹಿಸುವ ನಿರೀಕ್ಷೆ ಜಮ್ಮು ಮತ್ತು ಕಾಶ್ಮೀರ ಆಡಳಿತದ್ದು. ಮಹಾನಗರಿ ಪಾಲಿಕೆ­ಗಳು ಮತ್ತು ಇತರ ಸ್ಥಳೀಯ ಸಂಸ್ಥೆಗಳು ಆರ್ಥಿಕವಾಗಿ ಸ್ವಾವಲಂಬನೆ ಹೊಂದುವಂತೆ ಮಾಡುವುದೇ ಇದರ ಉದ್ದೇಶ ಎಂದು ಗೃಹ ಮತ್ತು ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯ­ದರ್ಶಿ ಎಚ್‌.ರಾಜೇಶ್‌ ಪ್ರಸಾದ್‌ ಹೇಳಿದ್ದಾರೆ.

ವಕೀಲರ ಪ್ರತಿಭಟನೆ
ಕೇಂದ್ರಾಡಳಿತ ಪ್ರದೇಶದಲ್ಲಿ ಆಸ್ತಿತೆರಿಗೆ ಹೇರುವ ನಿರ್ಧಾರ ಖಂಡಿಸಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ ಬಾರ್‌ ಅಸೋಸಿಯೇಶನ್‌ನ ವಕೀಲರು ಗುರು­ವಾರ ಪ್ರತಿಭಟನೆ ನಡೆಸಿದ್ದಾರೆ. ಆಡಳಿತದ ತಪ್ಪು ನಿರ್ಧಾರಗಳಿಂದಾಗಿ ಈಗಾಗಲೇ ಜನರು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next