Advertisement

ಕಾಲೇಜು ತಗರತಿ ಎಲ್ಲ ವಿದ್ಯಾರ್ಥಿಗಳಿಗೆ ಅನ್ವಯ

01:11 AM Nov 11, 2020 | mahesh |

ಬೆಂಗಳೂರು: ಕಾಲೇಜು ಆರಂಭಕ್ಕೆ ಸಂಬಂಧಿಸಿದ ನಿರ್ಧಾರ ಎಲ್ಲ ವರ್ಷದ ಅಥವಾ ಎಲ್ಲ ಸೆಮಿಸ್ಟರ್‌ಗಳ ಪದವಿ ವಿದ್ಯಾರ್ಥಿಗಳಿಗೂ ಅನ್ವಯವಾಗಲಿದ್ದು, ವಿದ್ಯಾರ್ಥಿಗಳು ಅಥವಾ ಉಪನ್ಯಾಸಕರು ಗೊಂದಲಕ್ಕೆ ಒಳಪಡುವ ಅಗತ್ಯವಿಲ್ಲ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

Advertisement

ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳು, ಖಾಸಗಿ ವಿಶ್ವವಿದ್ಯಾನಿಲಯಗಳು, ಸರಕಾರಿ, ತಾಂತ್ರಿಕ, ಡಿಪ್ಲೊಮಾ, ಅನುದಾನ ರಹಿತ ಕಾಲೇಜುಗಳನ್ನು ನ.17ರಿಂದ ಆರಂಭಿಸಲು ಸರಕಾರ ನಿರ್ಧರಿಸಿದೆ. ಇದಕ್ಕೆ ಪೂರಕವಾಗಿ ಪ್ರಮಾಣಿತ ಕಾರ್ಯಚರಣ ವಿಧಾನ (ಎಸ್‌ಒಪಿ) ಕೂಡ ಸಿದ್ಧಪಡಿಸಿದೆ. ಆದರೆ, ಎಸ್‌ಒಪಿಯಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳು ಮತ್ತು ಪದವಿ ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳನ್ನೇ ಹೆಚ್ಚು ಗಮನದಲ್ಲಿಟ್ಟುಕೊಂಡು ಸಿದ್ಧ ಪಡಿಸಲಾಗಿದೆ. ಉಳಿದ ಸೆಮಿಸ್ಟರ್‌ ವಿದ್ಯಾರ್ಥಿಗಳ ಭೌತಿಕ ತರಗತಿಗಳ ಬಗ್ಗೆ ಯಾವುದೇ ಸ್ಪಷ್ಟತೆ ಇರಲಿಲ್ಲ. ಹೀಗಾಗಿ ಪದವಿ, ಎಂಜಿನಿಯರಿಂಗ್‌, ಡಿಪ್ಲೊಮಾ ಮೊದಲಾದ ಕೋರ್ಸ್‌ಗಳ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಬೇರೆ ವಿದ್ಯಾರ್ಥಿಗಳಲ್ಲಿ ಸಾಕಷ್ಟು ಗೊಂದಲ ಸೃಷ್ಟಿಯಾಗಿತ್ತು.

ಈ ಸಂಬಂಧ ಮಾಹಿತಿ ನೀಡಿರುವ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಪ್ರೊ| ಎಸ್‌. ಮಲ್ಲೇಶ್ವರಪ್ಪ ಅವರು, ಕಾಲೇಜು ಆರಂಭಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಸಲಹೆ ಪಡೆದೇ ಎಸ್‌ಒಪಿ ಸಿದ್ಧಪಡಿಸಲಾಗಿದೆ. ಕಾಲೇಜಿನ ವಿದ್ಯಾರ್ಥಿಗಳ ಸಂಖ್ಯೆ, ಕೊಠಡಿ ಲಭ್ಯತೆಯ‌ನ್ನು ಗಮನಿಸಿಕೊಂಡು, ಪಾಳಿ ಪದ್ಧತಿ, ಸಂಪರ್ಕ ತರಗತಿ ಇತ್ಯಾದಿಗಳನ್ನು ನಡೆಸಲು ಸೂಚಿಸಿ ದ್ದೇವೆ. ನ.17ರಿಂದ ಎಲ್ಲ ಪದವಿಯ ಎಲ್ಲ ವಿದ್ಯಾರ್ಥಿಗಳಿಗೂ ಭೌತಿಕ ತರಗತಿಗಳು ಆರಂಭವಾಗಲಿವೆ. ಈ ಬಗ್ಗೆ ವಿದ್ಯಾರ್ಥಿ ಅಥವಾ ಉಪನ್ಯಾಸಕರಲ್ಲಿ ಯಾವುದೇ ಗೊಂದಲ ಬೇಡ ಎಂದು ಸ್ಪಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next