Advertisement

ಅಂತರ್‌ ಕಾಲೇಜು ಮಟ್ಟದ ಸಾಹಿತ್ಯ ಸ್ಪರ್ಧೆ

05:18 PM Mar 15, 2017 | Team Udayavani |

ಮಡಿಕೇರಿ: ಮಂಗಳೂರು ವಿಶ್ವ ವಿದ್ಯಾನಿಲಯ, ವಿದ್ಯಾರ್ಥಿ ಕ್ಷೇಮಪಾಲನಾ  ನಿರ್ದೇಶನಾಲಯ ಹಾಗೂ ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಕಾಲೆೇಜಿನ ವತಿಯಿಂದ ಅಂತರ್‌ ಕಾಲೇಜು ಮಟ್ಟದ ಸಾಹಿತ್ಯ ಸ್ಪರ್ಧೆ ನಡೆಯಿತು.    ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಡಾ| ರಿಚರ್ಡ್‌ ವಿನ್ಸೆಂಟ್‌ ಡಿ’ಸೋಜ, ಪಠ್ಯ ಚಟುವಟಿಕೆಗಳೊಂದಿಗೆ ಸಾಹಿತ್ಯ ಕ್ಷೇತ್ರದ ಬಗ್ಗೆಯೂ ವಿದ್ಯಾರ್ಥಿಗಳು ಆಸಕ್ತಿ ವಹಿಸಬೆೇಕೆಂದರು.

Advertisement

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೆೇಜಿನ ಪ್ರಾಂಶು ಪಾಲರಾದ ಡಾ| ಪಾರ್ವತಿ ಅಪ್ಪಯ್ಯ, ವಿದ್ಯಾರ್ಥಿಗಳು ಸಾಹಿತ್ಯ ಪ್ರತಿಭೆಯನ್ನು ಮೆರೆಯಬೇಕೆಂದರು.

ಮುಖ್ಯ ಅತಿಥಿಗಳಾಗಿ ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕ ಸುಬ್ರಹ್ಮಣ್ಯ, ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕರಾದ ಡಾ| ಉದಯ ಕುಮಾರ್‌ ಹಾಗೂ ಕಾರ್ಯಕ್ರಮ ಸಂಯೋಜಕರಾದ ಡಾ|ಎ.ಎನ್‌. ಗಾಯತ್ರಿ ಉಪಸ್ಥಿತರಿದ್ದರು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು. 

Advertisement

Udayavani is now on Telegram. Click here to join our channel and stay updated with the latest news.

Next