Advertisement

ಚಾಮರಾಜನಗರ: ಜನ್ಮದಿನದಂದೇ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ಕಾಲೇಜು ಉಪನ್ಯಾಸಕಿ

03:50 PM Aug 09, 2022 | Team Udayavani |

ಚಾಮರಾಜನಗರ: ತಮ್ಮ ಜನ್ಮದಿನದಂದೇ, ಕಾಲೇಜು ಉಪನ್ಯಾಸಕಿಯೋರ್ವರು ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ.

Advertisement

ನಗರದ ಜೆಎಸ್ಎಸ್ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಚಂದನಾ (26) ಮೃತರು. ಅವಿವಾಹಿತೆಯಾಗಿದ್ದ ಚಂದನಾ, ಯಳಂದೂರು ತಾಲ್ಲೂಕು ಅಂಬಳೆ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲೀಕ ಮಹದೇವಸ್ವಾಮಿ ಎಂಬುವರ ಪುತ್ರಿ. ಇವರು ನಗರದ ಜೆಎಸ್ಎಸ್ ಕಾಲೇಜಜಿನಲ್ಲಿ ಜೀವಶಾಸ್ತ್ರ ಉಪನ್ಯಾಸಕಿಯಾಗಿದ್ದರು.

ಇಂದು ಬೆಳಿಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ಘಟನೆ‌ ನಡೆದಿರಬಹುದೆಂದು ಹೇಳಲಾಗಿದೆ. ಬೆ. 11.30 ಆದರೂ ಚಂದನಾ ಅವರು ಹಾಸ್ಟೆಲ್ ರೂಮಿನಿಂದ ಹೊರಬಾರದ ಕಾರಣ ವೆಂಟಿಲೇಟರ್ ಮೂಲಕ ನೋಡಿದಾಗ ನೇಣು ಹಾಕಿಕೊಂಡಿರುವುದು ಕಂಡು ಬಂದಿದೆ.

ಇದನ್ನೂ ಓದಿ:ಸ್ವಾತಂತ್ರ್ಯ ವೀರರು@75: ಸಮಾಜದ ಕಟ್ಟುಕಟ್ಟಳೆಗಳ ವಿರುದ್ಧ ಹೋರಾಡಿದ್ದ ಧೀರ ಅಮಚಡಿ ತೇವನ್

ನಗರದ ಜೆಎಸ್ಎಸ್ ಕಾಲೇಜು ಕ್ಯಾಂಪಸ್ ನಲ್ಲಿರುವ ಹಾಸ್ಟೆಲ್ ನಲ್ಲಿ ವಾಸವಿದ್ದರು. ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ನಿಖರ ಕಾರಣ ತಿಳಿಸಿಲ್ಲ.

Advertisement

ಇಂದು ಅವರ ಜನ್ಮದಿನವಾಗಿದ್ದು ಹಾಸ್ಟೆಲ್ ಸಹೋದ್ಯೋಗಿಗಳು ಬೆಳಗ್ಗೆ ಶುಭ ಕೋರಿದ್ದಾರೆ. ತಿಂಡಿಗೆ ಕರೆದಾಗ ನನ್ನ ಮೂಡ್ ಚೆನ್ನಾಗಿಲ್ಲ ಆಮೇಲೆ ಬರುತ್ತೇನೆ ಎಂದು ಹೇಳಿದ್ದಾರೆ. ಕೆಲ ಸಮಯದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next