Advertisement

ಚಿಕ್ಕಬಳ್ಳಾಪುರದಲ್ಲಿ ಕಾಲೇಜು ಆರಂಭ: ನೀರಸ ಪ್ರತಿಕ್ರಿಯೆ

03:44 PM Nov 18, 2020 | Suhan S |

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೋವಿಡ್‌ಸೋಂಕು ದಿನೇ ದಿನೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಮಂಗಳವಾರ ಕೋವಿಡ್‌-19 ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸರ್ಕಾರಿ ಪ್ರಥಮ ದರ್ಜೆಕಾಲೇಜುಗಳನ್ನು ತೆರೆಯಲು ನಿರ್ಧಾರ ತೆಗೆದುಕೊಂಡಿದ್ದು, ಆದರೆ ಜಿಲ್ಲೆಯಲ್ಲಿ ಕಾಲೇಜು ಆರಂಭವಾದರೂ ಸಹ ಶೇ.30-35 ರಷ್ಟು ವಿದ್ಯಾರ್ಥಿಗಳು ಮಾತ್ರ ಹಾಜರಾದರು.

Advertisement

ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರ ಸಹಿತ ಜಿಲ್ಲೆಯ 6ತಾಲೂಕುಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗಳನ್ನು ಕೋವಿಡ್‌-19 ಮುನ್ನೆಚ್ಚರಿಕೆ ಕ್ರಮಗಳನ್ನುಕೈಗೊಂಡು ಆರಂಭಿಸಲಾಗಿದೆ. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಹಾಜರಾಗಿಲ್ಲ.ಮುನ್ನೆಚ್ಚರಿಕೆ ಕ್ರಮ ಪರಿಶೀಲನೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳುಕಾಲೇಜು ಆರಂಭಗೊಳ್ಳುವ ಮುನ್ನಕೋವಿಡ್‌-19ಮುನ್ನೆಚ್ಚರಿಕೆಕ್ರಮಗಳನ್ನು ಕೈಗೊಂಡಿರುವ ಕುರಿತು ಪರಿಶೀಲಿಸಿ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಕಾಲೇಜಿನ ಕೊಠಡಿ ಗಳನ್ನು ಸ್ಯಾನಿಟೈಸ್‌ ಮಾಡಿಸಿ ಶುಚಿಗೊಳಿಸಿದರು. ಕಾಲೇಜು ಪ್ರವೇಶ ದ್ವಾರದಲ್ಲಿ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಗುಂಪು ಸೇರುವುದಾಗಲಿ ಮಾಡಬಾರದೆಂದು ಮನವಿ ಮಾಡಿ ಸಾಮಾಜಿಕ ಅಂತರಕಾಯ್ದುಕೊಂಡು ತರಗತಿ ಆರಂಭಿಸಲಾಗಿದ್ದು, ಎಲ್ಲರು ಸಹಕರಿಸಬೇಕೆಂದು ಕೋರಿದರು.

ಜಿಲ್ಲಾ ಕೇಂದ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಹಿಳಾ ಕಾಲೇಜಿನಲ್ಲಿ ಕೋವಿಡ್‌-19 ಮುನ್ನೆಚ್ಚರಿಕೆ ಕ್ರಮಗಳನ್ನುಕೈಗೊಂಡು ತರಗತಿ ಆರಂಭಿ ಸಲಾಯಿತು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಮಾತ್ರವಿದ್ಯಾರ್ಥಿಗಳು ಹಾಜರಾಗಿರಲಿಲ್ಲ. ಪ್ರಥಮ ದಿನ ಉಪನ್ಯಾಸಕರು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಪಾಠ ಕೇಳುವ ಭಾಗ್ಯ ಒದಗಿಬಂದಿತ್ತು.

ಶೇ.30-35 ವಿದ್ಯಾರ್ಥಿಗಳು ಹಾಜರ್‌: ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 142 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ವಿದ್ಯಾರ್ಥಿಗಳನ್ನು ಕೋವಿಡ್‌-19 ಪರೀಕ್ಷೆಗೊಳಪಡಿಸಿ ಪ್ರವೇಶ ನೀಡಲಾಗಿದೆ. ವಿಜ್ಞಾನ ಮತ್ತು ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಆಫ್ಲೈನ್‌ ಮತ್ತು ಆನ್‌ ಲೈನ್‌ ತರಗತಿಗಳು ಆರಂಭವಾಗಿದ್ದು, ಶೇ.30-35 ವಿದ್ಯಾರ್ಥಿಗಳುಕಾಲೇಜಿಗೆ ಹಾಜರಾಗಿದ್ದಾರೆ.

ಕೋವಿಡ್‌ ಪರೀಕ್ಷೆ, ಹಿಂಜರಿಕೆ :  ಕಾಲೇಜು ಆರಂಭಗೊಂಡರೂ ಸಹ ಪೋಷಕರಿಂದ ಕಡ್ಡಾಯವಾಗಿ ಒಪ್ಪಿಗೆ ಪತ್ರ ತರಲು ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ.ಕಾಲೇಜಿನಲ್ಲಿಕೋವಿಡ್‌-19 ಪರೀಕ್ಷೆ ಮಾಡುತ್ತಿದ್ದಾರೆ ಎಂದುಬಹುತೇಕ ವಿದ್ಯಾರ್ಥಿಗಳುಕಾಲೇಜಿಗೆಬರಲು ಹಿಂಜರಿಯುತ್ತಿದ್ದಾರೆ ಎನ್ನಲಾಗಿದೆ.

Advertisement

ತಹಶೀಲ್ದಾರ್‌ ಪರಿಶೀಲನೆ :  ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆರಂಭವಾದ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಕೆ.ಅರುಂಧತಿ ಮತ್ತು ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ಮೂರ್ತಿ ಕೋವಿಡ್‌-19 ಮುನ್ನೆಚ್ಚರಿಕೆ ಕ್ರಮಗಳನ್ನುಕೈಗೊಂಡಿರುವುದನ್ನು ಪರಿಶೀಲಿಸಿ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು ವಿದ್ಯಾರ್ಥಿಗಳುಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಪಾಠಪ್ರಚನಗಳನ್ನುಕೇಳಬೇಕೆಂದು ಸಲಹೆ ನೀಡಿದರು.

ಸಾಮಾಜಿಕ ಅಂತರಕಾಯ್ದುಕೊಂಡು ಮಾಸ್ಕ್ ಧರಿಸಬೇಕೆಂದು ನಿರ್ದೇಶನನೀಡಲಾಗಿದೆ.ಕಾಲೇಜು ಆರಂಭವಾದರೂ ಸಹ ನಿರೀಕ್ಷಿತ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಹಾಜರಾಗಿಲ್ಲ. ಪೋಷಕರಿಂದ ಕಡ್ಡಾಯವಾಗಿ ಒಪ್ಪಿಗೆ ಪತ್ರ ಪಡೆದು ಕೊಂಡುಕೋವಿಡ್‌-19 ಪರೀಕ್ಷೆ ನಡೆಸಿ ಕಾಲೇಜಿನಲ್ಲಿ ಪ್ರವೇಶಕಲ್ಪಿಸಲಾಗಿದೆ. ಚಂದ್ರಯ್ಯ ಜಿ.ಡಿ, ಪ್ರಾಂಶುಪಾಲ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚಿಕ್ಕಬಳ್ಳಾಪುರ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆರಂಭವಾದ ಹಿನ್ನೆಲೆಯಲ್ಲಿ ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣ ಸ್ವತ್ಛಗೊಳಿಸಿ ಸ್ಯಾನಿ ಟೈಸ್‌ ಮಾಡಲಾಗಿದೆ. ವಿದ್ಯಾರ್ಥಿಗಳುಕೋವಿಡ್‌ ಮುನ್ನೆಚ್ಚರಿಕೆಕ್ರಮಗಳನ್ನುಕಡ್ಡಾಯವಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಡಿ.ಎಸ್‌.ಆನಂದರೆಡ್ಡಿ, ನಗರಸಭಾಧ್ಯಕ್ಷ, ಡಿ.ಲೋಹಿತ್‌, ಪೌರಾಯುಕ್ತ

 

Advertisement

Udayavani is now on Telegram. Click here to join our channel and stay updated with the latest news.

Next