Advertisement

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

05:14 PM Apr 19, 2024 | Team Udayavani |

ಮಂಗಳೂರು: ಹುಬ್ಬಳ್ಳಿಯಲ್ಲಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ(23) ಅವರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ ಆರೋಪಿ ಫ‌ಯಾಜ್‌ನಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಬಜರಂಗದಳ ಒತ್ತಾಯಿಸಿದೆ.

Advertisement

ಪ್ರೀತಿ ನಿರಾಕರಿಸಿದ್ದಕ್ಕೆ ಆರೋಪಿ ಕೊಲೆ ಮಾಡಿದ್ದಾನೆ. ಲವ್‌ ಜಿಹಾದ್‌ಗೆ ಮುಗ್ದ ಹೆಣ್ಣು ಮಗಳು ಬಲಿಯಾಗಿದ್ದಾಳೆ. ಆತನಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ರಾಜ್ಯ ಸರಕಾರದ ತುಷ್ಟೀಕರರಣ, ಮುಸ್ಲಿಂ ಓಲೈಕೆ ನೀತಿ, ಪರೋಕ್ಷ ಬೆಂಬಲದಿಂದ ಇಂತಹ ಕೃತ್ಯಗಳು ನಡೆಯುತ್ತಿದ್ದು ಇದರ ಹಿಂದೆ ಇರುವ ಜಾಲವನ್ನು ಪತ್ತೆ ಹಚ್ಚಿ ಕಠಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಜರಂಗದಳ ಪ್ರಾಂತ ಸಂಯೋಜಕ ಭುಜಂಗ ಕುಲಾಲ್‌ ಒತ್ತಾಯಿಸಿದ್ದಾರೆ.

ಮಡಿಕೇರಿಯಲ್ಲಿ ಕಾರು ಹತ್ತಿಸಿ ಬಿಜೆಪಿ ಕಾರ್ಯಕರ್ತರನ್ನು ಕೊಲೆ ನಡೆಸಲಾಗಿದೆ. ರಾಮನವಮಿಯಂದು ಜೈ ಶ್ರೀ ರಾಮ್‌ ಘೋಷಣೆ ಹಾಕಿದ್ದಕ್ಕೆ ಹಿಂದೂಗಳಿಗೆ ಹಲ್ಲೆ ನಡೆಸಲಾಗಿದೆ. ಚುನಾವಣೆಯ ಸಂದರ್ಭದಲ್ಲಿ ಹಿಂದೂಗಳನ್ನು ಗುರಿಯಾಗಿಟ್ಟು ಇಂತಹ ಕೃತ್ಯಗಳನ್ನು ನಡೆಸಲಾಗುತ್ತಿದೆ ಎಂದವರು ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next