ಚಿಕ್ಕಮಗಳೂರು : ಜಿಲ್ಲೆಯ ಕೊಪ್ಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ಕಾರ್ಫ್ ಹಾಗೂ ಕೇಸರಿ ಶಲ್ಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಗಲಾಟೆ ನಡೆದಿದೆ.
ಘಟನೆಯಲ್ಲಿ ಕೆಲವರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸ್ಕಾರ್ಫ್ ಹಾಗೂ ಕೇಸರಿ ಶಲ್ಯಕ್ಕೆ ಸಂಬಂಧಿಸಿದಂತೆ ಕೊಪ್ಪದ ಪದವಿ ಕಾಲೇಜಿನಲ್ಲಿ ವಿವಾದ ಆರಂಭಗೊಂಡಿತ್ತು. ಅಲ್ಲಿ ಶಾಸಕರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ವಿವಾದ ಅಂತ್ಯ ಕಾಣುತ್ತಿದ್ದಂತೆ ಪಿಯು ಕಾಲೇಜಿನಲ್ಲಿ ಆರಂಭಗೊಂಡಿದೆ. ಆದರೆ ಅದು ಒಂದು ಹಂತಕ್ಕೆ ಮುಂದಕ್ಕೆ ಹೋಗಿದೆ.
ಎರಡು ಗುಂಪುಗಳ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡು ಕಾಲೇಜಿನ ಆವರಣದಲ್ಲಿಯೇ ಹೊಡೆದಾಡಿಕೊಂಡಿದ್ದಾರೆ. ಬಳಿಕ ಈ ಘಟನೆ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.
ಈ ವಿವಾದದ ಆರಂಭದಲ್ಲಿಯೇ ಇತ್ಯರ್ಥಗೊಳಿಸುವಲ್ಲಿ ಕಾಲೇಜು ಆಡಳಿತ ಮಂಡಳಿ ಮುಂದಾಗಬೇಕಿತ್ತು. ಆದರೆ ಪ್ರಾಚಾರ್ಯ ಹಾಗೂ ಆಡಳಿತ ಮಂಡಳಿಯ ಬೇಜಾವ್ದಾರಿಯಿಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ.
ಇದನ್ನೂ ಓದಿ :ತಮಿಳುನಾಡಿನಲ್ಲಿ ವಿವಾದ ಎಬ್ಬಿಸಿದ ರಾಮ ಮಂದಿರ ನೆಲಸಮ: ವಿಡಿಯೋ ವೈರಲ್