ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಬೈಪಾಸ್ ನ ರೇವಡಿಹಾಳ ಕ್ರಾಸ್ ಬಳಿ ಸೋಮವಾರ ತಡರಾತ್ರಿ ಖಾಸಗಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಚಾಲಕರಿಬ್ಬರು ಸೇರಿ ಎಂಟು ಜನರು ಮೃತಪಟ್ಟು, 27 ಜನರು ಗಂಭೀರ ಗಾಯಗೊಂಡಿದ್ದಾರೆ.
ಬಸ್ ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರು ಕಡೆಗೆ ಹಾಗೂ ಲಾರಿ ಬೆಂಗಳೂರು ಕಡೆಯಿಂದ ಪುಣೆ ಕಡೆ ಹೊರಟಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಪರಿಣಾಮ ಸ್ಥಳದಲ್ಲೇ ಎರಡೂ ವಾಹನಗಳ ಚಾಲಕರು ಸೇರಿ ಆರು ಜನ ಮೃತಪಟ್ಟರೆ, ಇಬ್ಬರು ನಂತರ ಅಸುನೀಗಿದ್ದಾರೆ.
ಗಾಯಗೊಂಡ ಎಲ್ಲಾ 27 ಜನರು ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಕುಳಿಯೊಳಗೆ ನಿಗೂಢ ಅರಣ್ಯ ಪತ್ತೆ! ಇಲ್ಲಿವೆ 130 ಮೀ. ಎತ್ತರದ ಮರಗಳು, ಚೀನಾದಲ್ಲೊಂದು ವಿಸ್ಮಯ
Related Articles
ಅಪಘಾತ ಸಂಭವಿಸುತ್ತಿದ್ದಂತೆ ಮಹಾನಗರ ಪೊಲೀಸ್ ಆಯುಕ್ತ ಲಾಭೂ ರಾಮ ಹಾಗೂ ಉತ್ತರ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಕಿಮ್ಸ್ ಗೆ ದಾಖಲಿಸುವ ವ್ಯವಸ್ಥೆ ಮಾಡಿದ್ದಾರೆ.