Advertisement

Moodigere; ಕಾರು – ಟ್ರಾಕ್ಟರ್ ಡಿಕ್ಕಿ: ಕಾರು ಚಾಲಕನ ಸ್ಥಿತಿ ಗಂಭೀರ

02:36 PM Dec 21, 2023 | Team Udayavani |

ಚಿಕ್ಕಮಗಳೂರು: ಮಾರುತಿ 800 ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿದ್ದು ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ.

Advertisement

ಮೂಡಿಗೆರೆ ತಾಲೂಕು ಮುದ್ರೆಮನೆ ಸಮೀಪದ ಮುತ್ತಿಗೆಪುರ ಗ್ರಾಮದ ಬಳಿ ಅಪಘಾತ ನಡೆದಿದೆ.

ಕಾರು ಮತ್ತು ಟ್ರ್ಯಾಕ್ಟರ್ ನಡುವಿನ ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ.

ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಕಾರು ಚಾಲಕನನ್ನು ರಕ್ಷಣೆ ಮಾಡಿ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.   ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ಕಾರು ಚಾಲಕನ ಸ್ಥಿತಿ ಗಂಭೀರವಾಗಿದ್ದು, ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next