Advertisement

ಮಂಗಳಪದವು ಬಳಿ ಕಾಲೇಜು ಬಸ್-ಬೈಕ್ ನಡುವೆ ಭೀಕರ ಅಪಘಾತ: ಇಬ್ಬರಿಗೆ ಗಾಯ, ತಪ್ಪಿದ ಭಾರೀ ಅನಾಹುತ

09:13 AM Jul 02, 2021 | Team Udayavani |

ವಿಟ್ಲ: ಮೆಡಿಕಲ್ ಕಾಲೇಜಿನ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದು ಬಸ್ಸಿನಲ್ಲಿದ್ದ ಮಹಿಳಾ ಸಿಬ್ಬಂದಿ ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ಮಂಗಳಪದವು ಅನಂತಾಡಿ ರಸ್ತೆಯ ಸುರುಳಿಮೂಲೆಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

Advertisement

ಮಂಗಳೂರು ಅತ್ತಾವರ ಖಾಸಗಿ ಆಸ್ಪತ್ರೆಗೆ ಸೇರಿದ ಬಸ್ಸಿನಲ್ಲಿ ವೆನ್ಲಾಕ್, ಕೆಎಂಸಿ, ಮತ್ತು ಲೇಡಿಗೋಶನ್ ಆಸ್ಪತ್ರೆಗೆ ಸೇರಿದ ಸಿಬಂದಿಗಳನ್ನು ಕರೆದುಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ. ಪರಿಣಾಮ ಬಸ್ ರಸ್ತೆ ಬದಿಯ ಪ್ರಪಾತದ ಬಳಿ ವಾಲಿನಿಂತಿದೆ.

ಇದನ್ನೂ ಓದಿ:ಬಿಜೆಪಿಯಲ್ಲಿ ಏನೋ ಸಮಸ್ಯೆಯಿದೆ. ಇದು ಆಡಳಿತದ ಮೇಲೂ ದುಷ್ಪರಿಣಾಮ ಬೀರುತ್ತಿದೆ: R.V ದೇಶಪಾಂಡೆ

ಘಟನೆಯಲ್ಲಿ ಬಸ್ಸಿನಲ್ಲಿದ್ದ ಮೂವರು ಸ್ಟಾಫ್ ನರ್ಸ್ ಮತ್ತು ಬೈಕ್ ಸವಾರ ಗಾಯಗೊಂಡಿದ್ದಾರೆ. ಎಲ್ಲರನ್ನೂ ವಿಟ್ಲ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ಸಿನಲ್ಲಿ ಸುಮಾರು13 ಮಂದಿ ಪ್ರಯಾಣಿಸುತ್ತಿದ್ದರು. ಮಂಗಳೂರು ಕಡೆಗೆ ಮಂಗಳಪದವು, ಅನಂತಾಡಿ, ಮಾಣಿ ಕಡೆಯ ಸ್ಟಾಫ್ ನರ್ಸ್ ಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಬೈಕ್ ಸವಾರ ಇರಂದೂರು ಪಡೀಲ್ ನಿವಾಸಿ ಜಾಕೀರ್ ಎಂದು ಗುರುತಿಸಲಾಗಿದೆ.

Advertisement

ಅಪಘಾತದಿಂದ ಬಸ್ ರಸ್ತೆ ಬದಿಯ ಮರದ  ಬುಡದಲ್ಲಿ ಸಿಕ್ಕಿ ಹಾಕಿಕೊಂಡಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಪಕ್ಕದಲ್ಲಿ ಪ್ರಪಾತ ಇದ್ದು, ಮಹಿಳೆಯೊಬ್ಬರು ಕೆಳಗಡೆ ಉರುಳಿ ಬಿದ್ದಿದ್ದಾರೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next